Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬದುಕಿನ ಯಶಸ್ಸಿಗೆ ಶಿಕ್ಷಣ ಅತ್ಯವಶ್ಯಕ- ಜಿಲ್ಲಾಧ್ಯಕ್ಷ ನರೇಶ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶಿಕ್ಷಣ ಬದುಕಿನ ಯಶಸ್ಸಿನ ದೊಡ್ಡ ಸಾಧನಾ. ನಿರಂತರ ಪ್ರಯತ್ನ, ಛಲ, ಧೃಡ ಸಂಕಲ್ಪದಿಂದ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.

ಛಲವಾದಿ ಮಹಾಸಭಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ನಗರದ ಕೋರ್ಟ್ ರಸ್ತೆಯಲ್ಲಿನ ಖಾಸಗಿ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಹಾಗೂ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಶಿಕ್ಷಣವು ಸಮಾಜದಲ್ಲಿ ಉತ್ತಮ ಸ್ಥಾನಮಾನ, ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕನ್ನು ರೂಪಿಸುವ ಶಕ್ತಿಯಾಗಿದೆ ಎಂದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಫ್ರೋತ್ಸಾಹಿಸುವುದರಿಂದ ಅವರು ಜೀವನದಲ್ಲಿ ಮತ್ತಷ್ಟು ಯಶಸ್ಸುಗಳಿಸಲು ಪ್ರೇರೇಪಿಸಿದಂತಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮುದಾಯದ ಜವಾಬ್ದಾರಿಯಾಗಿದೆ. ಇಂತಹ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಸ್ಪೂರ್ತಿ ನೀಡುತ್ತವೆ ಎಂದ ಅವರು, ಸಮುದಾಯ ಏಳಿಗೆಗೆ ಶ್ರಮವಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಛಲವಾದಿ ಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ, ಮಹಾಸಭಾದ ರಾಜ್ಯಾಧ್ಯಕ್ಷರಾದ ವಾಣಿ ಕೆ. ಶಿವರಾಂ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ, ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಯು ರಮೇಶ್, ಗೌರವಾಧ್ಕ್ಷ ತಿಮ್ಮರಾಯಪ್ಪ ಡಿ., ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗೂಳ್ಯ ಹನುಮಣ್ಣ, ಸಮುದಾಯದ ಮುಖಂಡರಾದ ಮರಿಯಪ್ಪ, ಮುನಿರಾಜುಗೌಡ, ಜಗದೀಶ್, ಅನಿಲ್, ರಾಜು ಸಣ್ಣಕ್ಕಿ, ಮಲ್ಲರಾಜು, ಚಂದ್ರಪ್ಪ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ