Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಮಕ್ಕಳ ನಡುವಿನ ಅಂತರಕ್ಕೆ ಪರಿಣಾಮಕಾರಿ ಯೋಜನೆ: ಡಾ. ಚಂದ್ರಿಕಾ ಬಿ.ಆರ್

ವೈದ್ಯಾಧಿಕಾರಿಗಳಿಗೆ ಪುನರ್ಮನನ ತರಬೇತಿ ಕಾರ್ಯಾಗಾರ


ಬಳ್ಳಾರಿ,ಸೆ.25: ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಮಕ್ಕಳ ನಡುವಿನ ಅಂತರ ಕಾಯ್ದುಕೊಳ್ಳಲು ಸರ್ಕಾರವು ಹೊಸ ಹೊಸ ವಿಧಾನಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಚುಚ್ಚುಮದ್ದು, ಪಿಪಿಐಯುಸಿಡಿ, ಛಾಯಾ ಮಾತ್ರೆ ಹಾಗೂ ನಿರೋಧ್ ಸೇವೆಗಳು ಲಭ್ಯವಿದ್ದು, ಇದೀಗ ಹೊಸದಾಗಿ ಚರ್ಮದಡಿಯ ಗರ್ಭನಿರೋಧಕ ಇಂಪ್ಲಾAಟ್ ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಕುಟುಂಬ ಕಲ್ಯಾಣ ಕಾರ್ಯಕ್ರಮ ಉಪನಿರ್ದೇಶಕರಾದ ಡಾ. ಚಂದ್ರಿಕಾ ಬಿ.ಆರ್. ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ತಜ್ಞ ವೈದ್ಯರು, ತಾಲೂಕು ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ಗರ್ಭನಿರೋಧಕ ಅಳವಡಿಕೆ ಕುರಿತ ಪುನರ್ಮನನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಕಿಕಡ್ಡಿ ಗಾತ್ರದ ಈ ಸಣ್ಣ, ಹೊಂದಿಕೊಳ್ಳುವ ರಾಡ್ ಅನ್ನು ತರಬೇತಿ ಪಡೆದ ತಜ್ಞ ವೈದ್ಯರು ಮಹಿಳೆಯ ಮೇಲ್ತೋಳಿನ ಚರ್ಮದ ಕೆಳಗೆ ಅಳವಡಿಸುತ್ತಾರೆ. ಒಮ್ಮೆ ಅಳವಡಿಸಿದರೆ ಇದು ಗರ್ಭಧಾರಣೆಯಿಂದ ಸುಮಾರು 3 ವರ್ಷಗಳವರೆಗೆ ರಕ್ಷಣೆ ನೀಡುತ್ತದೆ. ಇದು ಅಂಡಾಶಯದಿAದ ಅಂಡಾಣು ಬಿಡುಗಡೆಯಾಗುವುದನ್ನು ತಡೆಯುತ್ತದೆ, ಗರ್ಭಕಂಠದ ಲೋಳೆಯನ್ನು ದಪ್ಪವಾಗಿಸಿ ವೀರ್ಯಾಣುಗಳು ಅಂಡಾಣುವನ್ನು ಸೇರದಂತೆ ತಡೆಯುತ್ತದೆ ಹಾಗೂ ಗರ್ಭಕೋಶದ ಒಳಪದರವನ್ನು ತೆಳುವಾಗಿಸಿ ಫಲವತ್ತಾದ ಅಂಡಾಣು ಅಳವಡಿಕೆಯಾಗುವುದನ್ನು ತಡೆಯುತ್ತದೆ ಎಂದು ತಿಳಿಸಿದರು.
ಇದು ಹಾರ್ಮೋನಿನ, ಹೆಚ್ಚು ಪರಿಣಾಮಕಾರಿಯಾದ ಮತ್ತು ಹಿಮ್ಮುಖಗೊಳಿಸಬಹುದಾದ ವಿಧಾನವಾಗಿದೆ. ಅರ್ಹ ದಂಪತಿಗಳಿಗೆ ಈ ಸೌಲಭ್ಯ ಒದಗಿಸುವುದರಿಂದ ಮಹಿಳೆಯರ ಆರೋಗ್ಯ ರಕ್ಷಣೆಯಾಗುವುದರ ಜೊತೆಗೆ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದು ಎಂದು ಅವರು ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಡಿ. ಮಳಗಿ ಮಾತನಾಡಿ, ಇದು ಅತ್ಯಂತ ಉಪಯುಕ್ತ ತರಬೇತಿಯಾಗಿದ್ದು, ವೈದ್ಯರು ಮತ್ತು ಸಿಬ್ಬಂದಿಗಳು ಇದರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕು. ತಮ್ಮ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಮೊದಲು ಅರ್ಹ ದಂಪತಿಗಳಿಗೆ ಈ ಬಗ್ಗೆ ಸೂಕ್ತ ಅರಿವು ಮೂಡಿಸಿ, ನಂತರ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಎಸ್‌ಆರ್‌ಎಚ್ ರಾಜ್ಯಮಟ್ಟದ ಕಾರ್ಯಕ್ರಮ ಅಧಿಕಾರಿ ಮಾಯಾಂಕ್ ಕೆಡೆ, ಐಪಿಇ ಗ್ಲೋಬಲ್ ಲಿಮಿಟೆಡ್ ದೆಹಲಿಯ ಕಾರ್ಯಕ್ರಮ ವ್ಯವಸ್ಥಾಪಕರಾದ ಶೋಭನಾ ಸಿಂಗ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ ಸೇರಿದಂತೆ ವಿವಿಧ ತಾಲೂಕು ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ವಿರುಪಾಕ್ಷಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ