ಹಿರಿಯನಾಯಕ ಶಾಮನೂರು ಶಿವಶಂಕರಪ್ಪರ ಅಂತಿಮ ದರ್ಶನ ಪಡೆದ ಗಣ್ಯರು.!
ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ, ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಅಜಾತಶತೃ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ದಾವಣಗೆರೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.
ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ಇಂದು ಬೆಳಿಗ್ಗೆ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ದಾವಣಗೆರೆ ನಿವಾಸಕ್ಕೆ ತರಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು, ಪೂಜಾ ಕೈಂಕರ್ಯಗಳು ನಡೆದ ಬಳಿಕ ಪಾರ್ಥಿವ ಶರೀರವನ್ನು ಹೈಸ್ಕೂಲು ಮೈದಾನಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಜನರು, ಬೆಂಗಲಿಗರು, ಅಭಿಮಾನಿಗಳು, ರಾಜಕೀಯ ಗಣ್ಯರು ಹಿರಿಯ ನಾಯಕನ ಅಂತಿಮ ದರ್ಶನ ಪಡೆದರು.
ಬಳಿಕ ಸಂಜೆ ಹೈಸ್ಕೂಲು ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್ ಆವರಣದವರೆಗೆ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರ್ರದ ಅಂತಿಮ ಯಾತ್ರೆ ನಡೆಯಿತು. ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು. ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಪಾಅರ್ಥೀವ ಶರೀರ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಖಾದರ್, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸರ್ಕಾರದ ಸಚಿವರು, ಶಾಸಕರು, ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆದರು. ಬಳಿಕ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತಿಮ-ವಿಧಿವಿಧಾನ ನೆರವೇರಿತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.