ನವದೆಹಲಿ: Mallikarjun Kharge, H. D. Deve Gowda, Eeranna Kadadi ಹಾಗೂ ನಾರಾಯಣ್ ಅವರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ (Rajya Sabha Elections) ಚುನಾವಣಾ ದಿನಾಂಕ ಪ್ರಕಟವಾಗಿದೆ. ಜೂನ್ 18 ರಂದು ಮತದಾನ ಹಾಗೂ ಅಂದೇ ಮತ ಎಣಿಕೆ ನಡೆಯಲಿದೆ. ಜೂನ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 9 ರಂದು ಪರಿಶೀಲನೆ ಮತ್ತು ಜೂನ್ 11 ರಂದು ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸೇರಿದಂತೆ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಜೋರಾಗಿವೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗುವ ಲೆಕ್ಕಾಚಾರ ಇದೆ. ಕಾಂಗ್ರೆಸ್ ಪಾಲಿನ ಮೂರು ಸ್ಥಾನಗಳಲ್ಲಿ ಒಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದುವರಿಯುವ ಸಾಧ್ಯತೆ ಹೆಚ್ಚಿದ್ದು, ಉಳಿದ ಎರಡು ಸ್ಥಾನಗಳಿಗೆ ತೀವ್ರ ಪೈಪೋಟಿ ಎದುರಾಗಲಿದೆ. ಇತ್ತ ಬಿಜೆಪಿಗೆ ಸಿಗುವ ಒಂದು ಸ್ಥಾನವನ್ನು ಜೆಡಿಎಸ್ ಪಡೆಯಲು ಕಸರತ್ತು ನಡೆಸುತ್ತಿದ್ದು, ಹೆಚ್.ಡಿ.ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಕುರಿತು ಚರ್ಚೆಗಳು ಸಾಗಿವೆ.