Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆಗಸ್ಟ್ 14ರಂದು ನಡೆಯಲಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾಗಿದ್ದು, ಸ್ಪೀಕರ್ ಚುನಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ (ಪ್ರೊ-ಟೆಮ್ ಸ್ಪೀಕರ್) ಆಗಿ ನೇಮಕ ಮಾಡಿದ್ದಾರೆ.
ವಿಧಾನಸಭೆಯ ಕಾರ್ಯವಿಧಾನ ಮತ್ತು ವ್ಯವಹಾರ ನಿರ್ವಹಣಾ ನಿಯಮಗಳ ಉಪನಿಯಮ 7(1)ರ ಅಡಿಯಲ್ಲಿ, ವಿಧಾನಸಭೆಯ ಸ್ಪೀಕರ್ ಚುನಾವಣೆಗೆ 2026ರ ಆಗಸ್ಟ್ 14ರಂದು ರಾಜ್ಯಪಾಲರು ನಿಗದಿಪಡಿಸಿದ್ದಾರೆ ಎಂದು ಕರ್ನಾಟಕ ವಿಧಾನಸಭೆ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ.
ಸ್ಪೀಕರ್ ಆಯ್ಕೆಗೆ ಸಂಬಂಧಿಸಿದಂತೆ, ಆಗಸ್ಟ್ 13ರಂದು ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಯಾವುದೇ ಸದಸ್ಯರು ಮತ್ತೊಬ್ಬ ಸದಸ್ಯರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವಂತೆ ಪ್ರಸ್ತಾಪಿಸುವ ನಿರ್ಣಯದ ಕುರಿತು ಲಿಖಿತ ನೋಟಿಸ್ ಅನ್ನು ವಿಧಾನಸಭೆಯ ಕಾರ್ಯದರ್ಶಿಗೆ ಸಲ್ಲಿಸಬಹುದಾಗಿದೆ. ಈ ನೋಟಿಸ್‌ಗೆ ಮತ್ತೊಬ್ಬ ಸದಸ್ಯರು ಅನುಮೋದನೆ (ಸೆಕೆಂಡ್) ನೀಡಿರಬೇಕು. ಅಲ್ಲದೆ, ಸ್ಪೀಕರ್ ಸ್ಥಾನಕ್ಕೆ ಪ್ರಸ್ತಾಪಿಸಲ್ಪಟ್ಟಿರುವ ಸದಸ್ಯರು ತಾವು ಆಯ್ಕೆಯಾದಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಲು ಸಿದ್ಧರಿರುವುದಾಗಿ ತಿಳಿಸುವ ಹೇಳಿಕೆಯನ್ನೂ ನೋಟಿಸ್‌ನೊಂದಿಗೆ ಸಲ್ಲಿಸಬೇಕು.
ಈ ನೋಟಿಸ್ ಅನ್ನು ಪ್ರಸ್ತಾಪಿತ ಅಭ್ಯರ್ಥಿ, ಪ್ರಸ್ತಾಪಕರು ಅಥವಾ ಅನುಮೋದನೆ ನೀಡುವ ಸದಸ್ಯರು ಖುದ್ದಾಗಿ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ವಿಧಾನಸಭೆಯ ಬುಲೆಟಿನ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ವಿಧಾನಸಭೆಯ ಸ್ಪೀಕರ್ ಸ್ಥಾನವು ಜೂನ್ 3ರಂದು ಯು.ಟಿ. ಖಾದರ್ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬಳಿಕ ತೆರವಾಗಿತ್ತು. ನಂತರ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಸ್ಪೀಕರ್ ಹುದ್ದೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.
ಆದರೆ, ಆಗಸ್ಟ್ 3ರಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ರುದ್ರಪ್ಪ ಲಮಾಣಿ ಅವರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾದರು. ಇದರಿಂದ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾದಂತಾಯಿತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಆಗಸ್ಟ್ 3ರಂದು ಪ್ರೊ-ಟೆಮ್ ಸ್ಪೀಕರ್ ಆಗಿ ನೇಮಕ ಮಾಡಿದ್ದು, ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಇದರ ನಡುವೆ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು ಉಪ ಸ್ಪೀಕರ್ ಹುದ್ದೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಜಿ.ಎಸ್. ಪಾಟೀಲ್ ಅವರನ್ನು ಸ್ಪೀಕರ್ ಹುದ್ದೆಗೆ ಹಾಗೂ ಎ.ಎಸ್. ಪೊನ್ನಣ್ಣ ಅವರನ್ನು ಉಪ ಸ್ಪೀಕರ್ ಹುದ್ದೆಗೆ ಪಕ್ಷದ ಅಭ್ಯರ್ಥಿಗಳನ್ನಾಗಿ ಅನುಮೋದಿಸಲಾಗಿದೆ. ವಿಪಕ್ಷಗಳ ಅಭ್ಯರ್ಥಿ ಘೋಷಣೆಯಾಗಬೇಕಿದೆ.
ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ, ಜಿ.ಎಸ್. ಪಾಟೀಲ್ ಸ್ಪೀಕರ್ ಆಗಿ ಮತ್ತು ಎ.ಎಸ್. ಪೊನ್ನಣ್ಣ ಉಪ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ