LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಲ್ಮೀಕಿ ನಾಯಕ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

 

ಚಿತ್ರದುರ್ಗ: ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಕೆ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಡಾ.ಹೆಚ್.ಗುಡ್ಡದೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು ಅವರ ವಯೋ ನಿವೃತ್ತಿಯಿಂದ ತೆರವಾದಂತಹ ಸ್ಥಾನಗಳಿಗೆ ಈಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಎಸ್.ಬಿ.ರವಿಶಂಕರ್, ಖಜಾಂಚಿಯಾಗಿ ಜೆ.ಎಸ್.ರವಿಕುಮಾರ್ (ಪೊಲೀಸ್ ರವಿ) ಅವರನ್ನು ನೇಮಕ ಮಾಡಲಾಗಿದೆ.

ಸಂಸ್ಥಾಪಕ ಅಧ್ಯಕ್ಷರಾಗಿ ಸಿ.ಜೆ.ಶ್ರೀನಿವಾಸ್ ಮುಂದುವರೆದಿದ್ದು, ಗೌರವಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬಿ.ವಿಮಲಾಕ್ಷಿ, ಉಪಾಧ್ಯಕ್ಷರಾಗಿ ಪಿಆರ್‍ಇಡಿ ಕೆ.ಹರೀಶ್, ಜಂಟಿ ಕಾರ್ಯದರ್ಶಿಯಾಗಿ ಕೃಷಿ ಇಲಾಖೆಯ ಟಿ.ಪಿ.ರಂಜಿತಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಲಸಂಪನ್ಮೂಲ ಇಲಾಖೆಯ ಎನ್.ಹೆಚ್.ಚಂದ್ರಪ್ಪ, ಕೆ.ಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್.ಡಿ.ಸುಮಂತ್ ಹಾಗೂ ಶಿಕ್ಷಣ ಇಲಾಖೆಯ ಕೆ.ಕೆ.ಓಬಳಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026