LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೆರಿಕದಲ್ಲಿ ಹೊಸ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಎಲಾನ್ ಮಸ್ಕ್

ವಾಷಿಂಗ್ಟನ್: ಅಮೆರಿಕದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಅನುಮೋದನೆ ಸಿಕ್ಕರೆ ಮರುದಿನವೇ ಹೊಸ ಪಕ್ಷವನ್ನು ಕಟ್ಟುವುದಾಗಿ ಎಲಾನ್ ಮಸ್ಕ್ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ.

ಒಂದು ಕಾಲದಲ್ಲಿ ಡೊನಾಲ್ಡ್​ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ​ ಬಿಲಿಯನೇರ್ ಎಲಾನ್ ಮಸ್ಕ್​ , ಟ್ರಂಪ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಮಸೂದೆ ತೆರಿಗೆದಾರರ ಮೇಲೆ ಭಾರಿ ಹೊರೆಯಾಗಲಿದೆ ಎಂದು ಮಸ್ಕ್​ ಅಭಿಪ್ರಾಯಪಟ್ಟಿದ್ದಾರೆ. ಒಂದೊಮ್ಮೆ ಈ ಬಿಲ್​ಗೆ ಅನುಮೋದನೆ ಸಿಕ್ಕರೆ ಜನರ ಹಿತಾಸಕ್ತಿಗಳಿಗೆ ನಿಜವಾಗಿಯೂ ಆದ್ಯತೆ ನೀಡುವ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ.

ಈ ಮಸೂದೆಯನ್ನು ಬೆಂಬಲಿಸುವ ಸಂಸದರು ಮುಂದಿನ ವರ್ಷ ಪ್ರಾಥಮಿಕ ಚುನಾವಣೆಯಲ್ಲಿ ಸೋಲನ್ನು ಎದುರಿಸಬೇಕಾಗುತ್ತದೆ ಎಂದು ಮಸ್ಕ್ ಸ್ಪಷ್ಟವಾಗಿ ಹೇಳಿದ್ದಾರೆ. ಶನಿವಾರ ಸೆನೆಟ್​ನಲ್ಲಿ ಮಸೂದೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಮಸ್ಕ್​ ಸಾಮಾಜಿಕ ಮಾಧ್ಯಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡುವುದಾಗಿ ಭರವಸೆ ನೀಡಿ ಈ ಮಸೂದೆಯನ್ನು ಬೆಂಬಲಿಸಿದ ಶಾಸಕರು ನಾಚಿಕೆಪಡಬೇಕು ಎಂದಿದ್ದಾರೆ.

ಮಸೂದೆಯನ್ನು ದುಬಾರಿ ಎಂದು ಕರೆದಿರುವ ಮಸ್ಕ್​​, ಇದನ್ನು ಪೋರ್ಕಿ ಪಿಗ್ ಪಾರ್ಟಿ ಎಂದಿದ್ದಾರೆ ಈ ಪದವನ್ನು ವ್ಯರ್ಥ ವೆಚ್ಚಕ್ಕೆ ಬಳಸಲಾಗುತ್ತದೆ. ಈ ಮಸೂದೆಯು ರಾಷ್ಟ್ರೀಯ ಸಾಲವನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು DOGE ಮೂಲಕ ಮಾಡಿರುವ ಎಲ್ಲಾ ಉಳಿತಾಯವನ್ನು ಹಾಳು ಮಾಡುತ್ತದೆ ಎಂದು ಮಸ್ಕ್​ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026