LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಘಟಕ/ಗಿರಿಜನ ಯೋಜನೆಗಳಿಂದ ಕಲಾವಿದರಿಗೆ ಪ್ರೋತ್ಸಾಹ : ಹೆಚ್.ಉಮೇಶ್


ಶಿವಮೊಗ್ಗ,ಜು.2: ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ/ಪಂಗಡದ ಕಲಾವಿದರು ಮತ್ತು ಸಂಸ್ಥೆಗಳಿಗೆ ಕಲೆ-ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಭದ್ರಾವತಿ ನಗರದ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಆಯೋಜಿಸಿದ್ದ ಮಹಿಳಾ ಡೊಳ್ಳು ಕುಣಿತ ಹಾಗೂ ಜನಪದ/ರಂಗಗೀತೆಗಳ ಕಲಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ವಾರದಲ್ಲಿ ಮೂರು ದಿನ, 6 ತಿಂಗಳ ಕಾಲ 25 ಜನ ಪರಿಶಿಷ್ಟ ಜಾತಿಯ ಕಲಾವಿದರಿಗೆ ಡೊಳ್ಳು ಕುಣಿತ ತರಬೇತಿ ನೀಡಲಾಗುತ್ತಿದೆ. ಗಂಡು ಕಲೆಯೆಂದೇ ಹೆಸರಾಗಿರುವ ಡೊಳ್ಳು ಕುಣಿತದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರು ಆಸಕ್ತಿ ತೋರಿ ಕಲಿಯುತ್ತಿರುವುದು ವಿಶೇಷವಾಗಿದೆ. ಹಾಗೂ 15 ಜನರಿಗೆ ಜಾನಪದ ಗೀತೆ ಮತ್ತು ರಂಗಗೀತೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಸ್ವಾಗತ ಭಾಷಣ ಮಾಡಿದರು.

ಡೊಳ್ಳು ಕಲೆಯ ಬಗ್ಗೆ ಹಿರಿಯ ಡೊಳ್ಳು ಕಲಾವಿದರಾದ ಹೆಗ್ಗೋಡಿನ ಪಣಿಯಮ್ಮ ಹಾಗೂ ಮಂಜು ರಂಗಾಯಣ ಇವರು ರಂಗಗೀತೆ/ ಜಾನಪದ ಗೀತೆಗಳ ಬಗ್ಗೆ ಮಾಹಿತಿಯನ್ನು ಮಾಹಿತಿ ನೀಡಿದರು. ನಿಲಯ ಪಾಲಕರಾದ ಶೀಲಾ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿಗಳು, ಪೋಷಕರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು