LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಡಿಓ ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ ಜಾರಿ

 

ಚಿತ್ರದುರ್ಗ: ಇದೇ ಡಿ.07 ಮತ್ತು 8 ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಗಳಂತೆ ನಡೆಸುವ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಡಿ.07ರಂದು ಕನ್ನಡ ಭಾಷಾ ಪರೀಕ್ಷೆ ಚಿತ್ರದುರ್ಗ ನಗರದಲ್ಲಿ 28 ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ನಗರದಲ್ಲಿ 01 ಪರೀಕ್ಷಾ ಕೇಂದ್ರದಲ್ಲಿ ಮತ್ತು ಡಿ.08ರಂದು ಸಾಮಾನ್ಯ ಜ್ಞಾನ  ಪರೀಕ್ಷೆ ಚಿತ್ರದುರ್ಗ ನಗರದಲ್ಲಿ 30 ಪರೀಕ್ಷಾ ಕೇಂದ್ರಗಳು ಹಾಗೂ ಚಳ್ಳಕೆರೆ ನಗರದಲ್ಲಿ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನದಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು'ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು': ಸಂಸದ ಕ್ಯಾ. ಚೌಟ