Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bagalkot

ಗರ್ಭಿಣಿಯಾಗಿ ಅಧಿಕಾರಿಗಳೇ ಎಂಟ್ರಿ; ಭ್ರೂಣ ಲಿಂಗ ಪತ್ತೆ ಜಾಲ ಬಯಲು!

ಮಹಾರಾ? ಗಡಿ ಭಾಗದಲ್ಲಿ ಅಂಡರ್‌ಕವರ್ ಕಾರ್ಯಾಚರಣೆ | ಪೋರ್ಟಬಲ್ ಸ್ಕ್ಯಾನಿಂಗ್ ಯಂತ್ರ ಜಪ್ತಿ | ನಕಲಿ ವೈದ್ಯ ಸೇರಿ ಹಲವರ ವಿರುದ್ಧ ಪ್ರಕರಣ

 

 

ಮಹಾಲಿಂಗಪುರ: ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಮಾಡಿ, ಹಣಕ್ಕಾಗಿ ಅಕ್ರಮ ಗರ್ಭಪಾತಕ್ಕೆ ದಾರಿ ಮಾಡಿಕೊಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆ-ಮಹಾರಾ? ಗಡಿ ಭಾಗದಲ್ಲಿ ಆರೋಗ್ಯ ಹಾಗೂ ಆಡಳಿತ ಇಲಾಖೆ ಅಧಿಕಾರಿಗಳು ನಡೆಸಿದ ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಭ್ರೂಣ ಲಿಂಗ ಪತ್ತೆ ಜಾಲವೊಂದು ಬೆಳಕಿಗೆ ಬಂದಿದೆ.ಅಧಿಕಾರಿಗಳೇ ಗ್ರಾಹಕರ ಸೋಗಿನಲ್ಲಿ ದಂಧೆಯೊಳಗೆ ಪ್ರವೇಶಿಸಿ, ಗರ್ಭಿಣಿ ಮಹಿಳೆಯಾಗಿ ನಟಿಸಿ ಮಾಹಿತಿ ಸಂಗ್ರಹಿಸಿದ ಬಳಿಕ ಮಹಾರಾ?ದ ಜತ್ ತಾಲೂಕಿನ ಚಾದರ ಬಬಾಲಾದಿ ಹಾಗೂ ಕರ್ಜಿ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಬಳಸುತ್ತಿದ್ದ ಪೋರ್ಟಬಲ್ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.ಬಾಗಲಕೋಟೆ ಜಿಲ್ಲೆ ಹಾಗೂ ಮಹಾರಾ? ಗಡಿ ಭಾಗದಲ್ಲಿ ಭ್ರೂಣದ ಲಿಂಗ ಪತ್ತೆ ಹಾಗೂ ಅಕ್ರಮ ಗರ್ಭಪಾತಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇ? ತಂಡವು ನೇರವಾಗಿ ದಾಳಿ ನಡೆಸುವ ಬದಲು, ಮೊದಲು ಗ್ರಾಹಕರ ಸೋಗಿನಲ್ಲಿ ಸಂಪರ್ಕ ಸಾಧಿಸಿ ಜಾಲದ ಕಾರ್ಯವಿಧಾನ ಹಾಗೂ ಸಂಬಂಧಿತ ವ್ಯಕ್ತಿಗಳ ಕುರಿತು ಮಾಹಿತಿ ಕಲೆಹಾಕಿದೆ ಎನ್ನಲಾಗಿದೆ.ನಂತರ ಗರ್ಭಿಣಿ ಮಹಿಳೆಯ ಸೋಗಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿ, ಮಹಾರಾ? ಗಡಿ ಭಾಗದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಪೋರ್ಟಬಲ್ ಸ್ಕ್ಯಾನಿಂಗ್ ಯಂತ್ರ ಹಾಗೂ ಸಂಬಂಧಿತ ಪರಿಕರಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡಿದ್ದಾರೆ.ನಕಲಿ ವೈದ್ಯನೇ ಜಾಲದ ಪ್ರಮುಖ ಕೊಂಡಿ : ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಜಯ್ ವಾಗ್ಮೋರೆ ಉರ್ಫ್ ಪಾಟೀಲ್ ಎಂಬಾತ ಸೇರಿದಂತೆ ಇತರರ ವಿರುದ್ಧ ಮಹಾರಾ?ದ ಉಮ್ಮದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಜಾಲದ ಹಿಂದೆ ಇನ್ನೂ ಯಾರೆಲ್ಲ ಇದ್ದಾರೆ? ಗಡಿ ದಾಟಿ ಇದರ ಚಟುವಟಿಕೆಗಳು ಎ? ದೂರ ವಿಸ್ತರಿಸಿವೆ? ಸ್ಕ್ಯಾನಿಂಗ್ ಬಳಿಕ ಅಕ್ರಮ ಗರ್ಭಪಾತ ನಡೆಸಲಾಗುತ್ತಿತ್ತೇ? ಎಂಬ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಯುವ ಸಾಧ್ಯತೆ ಇದೆ.ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ : ಕಾರ್ಯಾಚರಣೆಗೆ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಮೋಹನ್ ಬಿಡೇಕರ ಆಫೀಸರ್ ಶೋಭಾ, ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸುವರ್ಣ ಅವರ ನೇತೃತ್ವದಲ್ಲಿ ಆರೋಗ್ಯ ಹಾಗೂ ಆಡಳಿತ ಇಲಾಖೆಯ ಅಧಿಕಾರಿಗಳ ವಿಶೇ? ತಂಡ ಕಾರ್ಯನಿರ್ವಹಿಸಿತು. ತಂಡದಲ್ಲಿ ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಗ್ರಾಮ ಆಡಳಿತ ಅಧಿಕಾರಿ ಸೌರಭ ಮೇತ್ರಿ, ರವಿ ಗಡ್ಡೆಪ್ಪನ್ನವರ, ಮಲ್ಲಿಕಾರ್ಜುನ ಕವಟಗೊಪ್ಪ ಹಾಗೂ ಸಿ.ಎಸ್. ಕೊಣ್ಣೂರ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಗಡಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬಳಸಲಾಗುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡಿರುವುದು ಪ್ರಕರಣದ ತನಿಖೆಗೆ ಪ್ರಮುಖ ಸಾಕ್ಷ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Pಅ-Pಓಆಖಿ ಕಾಯ್ದೆಯಡಿ ಕಠಿಣ ಕ್ರಮ ಭ್ರೂಣದ ಲಿಂಗ ಪತ್ತೆ ಮಾಡುವುದು ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳ ವಿರುದ್ಧ Pಅ-Pಓಆಖಿ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮಕ್ಕೆ ಅವಕಾಶವಿದೆ. ಅಕ್ರಮ ಗರ್ಭಪಾತಕ್ಕೆ ಸಂಬಂಧಿಸಿದಂತೆ ಒಖಿP ಕಾಯ್ದೆ ಹಾಗೂ ಅನ್ವಯವಾಗುವ ಭಾರತೀಯ ನ್ಯಾಯ ಸಂಹಿತೆ (ಃಓS) ಠಿಡಿovisioಟಿs ಅಡಿಯಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆರೋಪಗಳು ತನಿಖೆಯಲ್ಲಿ ಸಾಬೀತಾದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಜೈಲು ಶಿಕ್ಷೆ ಹಾಗೂ ದಂಡ ಸೇರಿದಂತೆ ಕಠಿಣ ಕ್ರಮ ಜರುಗುವ ಸಾಧ್ಯತೆ ಇದೆ. ಗಡಿ ದಾಟಿದ ದಂಧೆಗೆ ಕಡಿವಾಣ ಯಾವಾಗ ಬಾಗಲಕೋಟೆ-ಮಹಾರಾ? ಗಡಿ ಭಾಗದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಅಕ್ರಮ ವೈದ್ಯಕೀಯ ಚಟುವಟಿಕೆಗಳ ಕುರಿತು ಈ ಹಿಂದೆ ಕೂಡ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ಇದೀಗ ನಡೆದ ಅಂಡರ್‌ಕವರ್ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ.ಗರ್ಭದಲ್ಲಿರುವ ಮಗುವಿನ ಲಿಂಗವನ್ನು ಹಣಕ್ಕಾಗಿ ಪತ್ತೆಹಚ್ಚುವ ಪ್ರಯತ್ನವು ಕಾನೂನು ಉಲ್ಲಂಘನೆಯ ಜೊತೆಗೆ ಹೆಣ್ಣು ಭ್ರೂಣಹತ್ಯೆಯಂತಹ ಸಾಮಾಜಿಕ ಪಿಡುಗಿಗೆ ಕಾರಣವಾಗುವ ಅಪಾಯಕಾರಿ ಚಟುವಟಿಕೆಯಾಗಿದೆ. ಹೀಗಾಗಿ ಗಡಿ ಭಾಗದಲ್ಲಿ ಇಂತಹ ಜಾಲಗಳ ಕುರಿತು ಮತ್ತ? ನಿಗಾ ವಹಿಸಿ, ಸಂಬಂಧಪಟ್ಟವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.ಅಕ್ರಮ ಭ್ರೂಣ ಲಿಂಗ ಪತ್ತೆ, ಅಕ್ರಮ ಗರ್ಭಪಾತ ಅಥವಾ ವೈದ್ಯಕೀಯ ಹೆಸರಿನಲ್ಲಿ ನಡೆಯುವ ಯಾವುದೇ ಕಾನೂನುಬಾಹಿರ ಚಟುವಟಿಕೆಗಳ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾದಲ್ಲಿ, ತಕ್ಷಣವೇ ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ