LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತ್ಯಾಚಾರ, ಕೊಲೆ ಕೇಸ್‌: ಮರಣದಂಡನೆಗೆ ಗುರಿಯಾದ ಅಪರಾಧಿ ಸೆಂಟ್ರಲ್‌ ಜೈಲಿನಿಂದ ಎಸ್ಕೇಪ್‌

ಸುಮಾರು 13 ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳ ಯುವತಿ ಅತ್ಯಾಚಾರ ಕೊಲೆ ಪ್ರಕರಣದ ಅಪರಾಧಿ ಸೆಂಟ್ರಲ್‌ ಜೈಲಿನಿಂದ ಎಸ್ಕೇಪ್‌ ಆಗಿರುವ ಘಟನೆ ವರದಿಯಾಗಿದೆ. ಸೌಮ್ಯಾ ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ, ಕಣ್ಣೂರು ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡ ವರದಿಯಾಗಿದೆ.



ಜುಲೈ 25, ಶುಕ್ರವಾರ ಬೆಳಿಗ್ಗೆ ನಡೆಸಿದ ನಿಯಮಿತ ತಪಾಸಣೆಯ ಸಮಯದಲ್ಲಿ ಗೋವಿಂದ ಚಾಮಿ ಜೈಲಿನಲ್ಲಿ ಇಲ್ಲ ಎಂಬುದು ಪತ್ತೆಯಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಆತನಿಗಾಗಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ತೀವ್ರವಾದ ಹುಡುಕಾಟ ಶುರು ಮಾಡಿದ್ದಾರೆ.

ಮೂಲತಃ ತಮಿಳುನಾಡಿನವನಾಗಿರುವ ಗೋವಿಂದಚಾಮಿ ಒಂದೇ ತೋಳನ್ನು ಹೊಂದಿದ್ದ ಎಂದು ತಿಳಿದುಬಂದಿದೆ. ಈತನಿಗೆ ಫೆಬ್ರವರಿ 1, 2011ರ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ. ಬಳಿಕ ಸುಪ್ರೀಂ ಕೋರ್ಟ್ ಮರಣದಂಡನೆಯನ್ನು ಕಡಿಮೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಏನಿದು ಪ್ರಕರಣ?

ಫೆಬ್ರವರಿ 1, 2011 ರಂದು ಸೌಮ್ಯ ಎಂಬ ಯುವತಿ ಎರ್ನಾಕುಲಂನಿಂದ ಶೋರ್ನೂರ್‌ಗೆ ಹೋಗುವ ರೈಲಿನಲ್ಲಿ ಮಹಿಳಾ ಕಂಪಾರ್ಟ್‌ಮೆಂಟ್‌ಗೆ ಹತ್ತಿದ್ದಳು. ಏಕಾಏಕಿ ಕಂಪಾರ್ಟ್‌ಮೆಂಟ್‌ಗೆ ನುಗ್ಗಿದ ಗೋವಿಂದಚಾಮಿ, ಸೌಮ್ಯ ಮೇಲೆ ಹಲ್ಲೆ ನಡೆಸಿ, ಬರ್ಬರವಾಗಿ ಅತ್ಯಾಚಾರ ಎಸಗಿ ನಂತರ ರೈಲಿನಿಂದ ಎಸೆದು ಕ್ರೌರ್ಯ ಮೆರೆದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಾ ಫೆಬ್ರವರಿ 6, 2011 ರಂದು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಚಾಮಿಯನ್ನು ಅರೆಸ್ಟ್‌ ಮಾಡಲಾಗಿತ್ತು. ತ್ರಿಶೂರ್ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ನವೆಂಬರ್ 11, 2011 ರಂದು ಗೋವಿಂದಚಾಮಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಆದಾಗ್ಯೂ, ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 2016 ರಲ್ಲಿ ಮರಣದಂಡನೆಯನ್ನು ಕಡಿಮೆ ಮಾಡಿತು



ಇನ್ನು ಕೇವಲ ಒಂದೇ ಒಂದು ಕೈ ಇರುವ ವ್ಯಕ್ತಿ ಜೈಲಿನಿಂದ ಹೇಗೆ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂಬ ಪ್ರಶ್ನೆ ಇದೀಗ ಮೂಡಿದೆ. ಆತನ ಪತ್ತೆಗಾಗಿ ಪೊಲೀಸರ ತಂಡ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅವನು ಹಲವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026