Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕದಲ್ಲಿ ಹೊಸದಾಗಿ 1243 ಹೊಸ ಇವಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆ : ಎಚ್‌.ಡಿ. ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ದೇಶದ ಆಟೋಮೊಬೈಲ್ ವಲಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸಲು ಮತ್ತು ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನ (EV) ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗಾಗಿ ಒಟ್ಟು ₹503.86 ಕೋಟಿ ಮೌಲ್ಯದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ ₹123.26 ಕೋಟಿ ಹಂಚಿಕೆಯಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಪಿಎಂ ಇ-ಡ್ರೈವ್ (PM E-DRIVE)’ ಯೋಜನೆಯಡಿ ದೇಶಾದ್ಯಂತ ಇವಿ ಚಾರ್ಜಿಂಗ್ ಮೂಲಸೌಕರ್ಯ ಸಬಲೀಕರಣ ಕುರಿತ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಒಟ್ಟು 1,243 ಇವಿ ಚಾರ್ಜರ್‌ಗಳನ್ನು ಸ್ಥಾಪಿಸಲು ₹123.26 ಕೋಟಿ ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಮೊದಲ ಹಂತದಲ್ಲಿ ಈಗಾಗಲೇ ₹20 ಕೋಟಿ ಬಿಡುಗಡೆ ಮಾಡಲಾಗಿದೆ.
ಒಟ್ಟು ₹503.86 ಕೋಟಿ ವೆಚ್ಚದಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ (CPSUs) 4,874 ಇವಿ ಚಾರ್ಜರ್‌ಗಳನ್ನು ಅಳವಡಿಸಲಾಗುತ್ತದೆ ಎಂದರು.  ರಾಜಸ್ಥಾನ, ಆಂಧ್ರಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಈ ಯೋಜನೆಯ ಲಾಭ ಪಡೆಯಲಿವೆ. ಇದರೊಂದಿಗೆ ಎಚ್‌ಪಿಸಿಎಲ್‌ (HPCL), ಐಒಸಿಎಲ್‌ (IOCL) ಮತ್ತು ಬಿಪಿಸಿಎಲ್‌ (BPCL)ನಂತಹ ಪ್ರಮುಖ ತೈಲ ಕಂಪನಿಗಳೂ ಇದರಲ್ಲಿ ಭಾಗಿಯಾಗಿವೆ.

ಇವಿ ವಲಯದ ಬಲವರ್ಧನೆಗೆ ವಿವಿಧ ಯೋಜನೆಗಳು:
ಸಚಿವರು ತಮ್ಮ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಪ್ರೋತ್ಸಾಹಕ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
₹18,100 ಕೋಟಿ ವೆಚ್ಚದ ಪಿಎಲ್‌ಐ ಎಸಿಸಿ (PLI ACC) ಯೋಜನೆಯು ಬ್ಯಾಟರಿ ಸೆಲ್ ಉತ್ಪಾದನೆಯನ್ನು ಉತ್ತೇಜಿಸಲಿದೆ. ₹25,938 ಕೋಟಿ ವೆಚ್ಚದ ಪಿಎಲ್‌ಐ ಆಟೋ ಯೋಜನೆಯು ಹೈಡ್ರೋಜನ್ ಮತ್ತು ಎಲೆಕ್ಟ್ರಿಕ್ ವಾಹನಗಳ ಬಿಡಿಭಾಗಗಳ ತಯಾರಿಕೆಗೆ ಬೆಂಬಲ ನೀಡಲಿದೆ. ಹಾಗೂ ₹7,280 ಕೋಟಿ ವೆಚ್ಚದ ಆರ್‌ಇ ಪಿಎಂ (RE PM) ಯೋಜನೆಯು ಅಪರೂಪದ ಭೂಮಿಯ ಅಯಸ್ಕಾಂತಗಳ (Rare Earth Magnets) ತಯಾರಿಕೆಯಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
₹10,900 ಕೋಟಿ ವೆಚ್ಚದ ಪಿಎಂ ಇ ಡ್ರೈವ್‌ (PM E-Drive) ಯೋಜನೆಯು ಇಡೀ ಇವಿ ಸಂಚಾರ ವ್ಯವಸ್ಥೆಯ ಬೆನ್ನೆಲುಬಾಗಿದೆ. ಇದರಲ್ಲಿ ಈ ಯೋಜನೆಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳಿಗಾಗಿಯೇ ₹2,000 ಕೋಟಿ ಮೀಸಲಿಡಲಾಗಿದೆ ಎಂದರು.

‘ಯುಬಿಸಿ’ ಆ್ಯಪ್: ಇವಿ ಚಾರ್ಜಿಂಗ್ ಲೋಕದ ಯುಪಿಐ (UPI)
ಡಿಜಿಟಲ್ ಪಾವತಿಯಲ್ಲಿ ಯುಪಿಐ ತಂದ ಕ್ರಾಂತಿಯಂತೆಯೇ, ಎಲೆಕ್ಟ್ರಿಕ್ ವಾಹನ ಬಳಕೆದಾರರಿಗಾಗಿ ‘ಯೂನಿಫೈಡ್ ಭಾರತ್ ಇ-ಚಾರ್ಜ್ (UBC)’ ಎಂಬ ರಾಷ್ಟ್ರೀಯ ಏಕೀಕೃತ ಆ್ಯಪ್ ಅನ್ನು ಸಚಿವಾಲಯ ಅಭಿವೃದ್ಧಿಪಡಿಸುತ್ತಿದೆ. ಇದು ಇವಿ ಬಳಕೆದಾರರಿಗೆ ಯಾವುದೇ ಕಂಪನಿಯ ಚಾರ್ಜಿಂಗ್ ಪಾಯಿಂಟ್ ಅನ್ನು ಸುಲಭವಾಗಿ ಪತ್ತೆಹಚ್ಚಲು ಮತ್ತು ಪಾವತಿ ಮಾಡಲು ಒಂದೇ ವೇದಿಕೆಯನ್ನು ಒದಗಿಸಲಿದೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ