Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಥೆನಾಲ್ ಗುರಿ ಸಾಧನೆ: ಸಂಸದ ಈರಣ್ಣ ಕಡಾಡಿ

[video width="640" height="360" mp4="https://janajeevala.com/wp-content/uploads/2023/07/VID-20230726-WA0218.mp4"][/video]

ಬೆಳಗಾವಿ: ಕರ್ನಾಟಕ ರಾಜ್ಯದಿಂದ ವಾರ್ಷಿಕ ಸುಮಾರು 144 ಕೋಟಿ ಲೀಟರ್‌ಗಳ ಅಂದಾಜು ಎಥೆನಾಲ್ ಸಾಮರ್ಥ್ಯದ ಉತ್ಪಾದನೆಗಾಗಿ 36 ಯೋಜನೆಗಳಿಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಬಡ್ಡಿ ರಿಯಾಯಿತಿ ಯೋಜನೆಯಡಿ 119,90 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.

ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಜೈವಿಕ ಇಂಧನಗಳ ಉತ್ಪಾದನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018 ರ ಪ್ರಕಾರ, ದೇಶದಲ್ಲಿ ಜೈವಿಕ ಇಂಧನ ಉತ್ಪಾದನೆಯನ್ನು ಉತ್ತೇಜಿಸಲು, ಅವುಗಳನ್ನು ರಫ್ತು ಮಾಡಲು ಉದ್ದೇಶಿಸಿರುವ ಜೈವಿಕ ಇಂಧನಗಳ ಉತ್ಪಾದನೆಗೆ ಫೀಡ್ ಸ್ಟಾಕ್ ಆಮದು ಮಾಡಿಕೊಳ್ಳಲು ಯಾವುದೇ ನಿಬರ್ಂಧವಿಲ್ಲದೆ ಅನುಮತಿಸಲಾಗಿದೆ.

ವಾಣಿಜ್ಯ ಗುಪ್ತಚರ ಮತ್ತು ಅಂಕಿಅಂಶಗಳ ಮಹಾನಿರ್ದೇಶನಾಲಯವು 2022-23 ರ ಹಣಕಾಸು ವರ್ಷದಲ್ಲಿ ಭಾರತೀಯ ವ್ಯಾಪಾರ ವರ್ಗೀಕರಣದ ಅಡಿಯಲ್ಲಿ 35,20,064 ಕೆಜಿ ಜೈವಿಕ ಡೀಸೆಲ್ ಮತ್ತು ಮಿಶ್ರಣವನ್ನು ಹಾರ್ಮೋನೈಸ್ ಸಿಸ್ಟಮ್ ಕೋಡ್‌ಗಳನ್ನು ಆಧರಿಸಿ 3,82,60,000 ರಫ್ತು ಮಾಡಲಾಗಿದೆ. 2025-26ರ ವೇಳೆಗೆ ಭಾರತದಲ್ಲಿ ಶೇ 20% ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸಲು ಮಾರ್ಗದರ್ಶನ ನೀಡುತ್ತದೆ. ಎಥೆನಾಲ್ ಸರಬರಾಜು ವರ್ಷ 2021-22 ಕ್ಕೆ 10% ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ