Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ, ಬಿಜೆಪಿ ವಿರೋಧಪಕ್ಷಕ್ಕೆ ಸೀಮಿತ- ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
2023
ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ವಿರೋಧಪಕ್ಷದವರ ಪ್ರಶ್ನೆಗೆ ಅವರು ಮಂಗಳವಾರ ಉತ್ತರಿಸುತ್ತಾ ಮಾತನಾಡಿದರು.

ಗಾದೆ ಮಾತೆನಂತೆ  ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ-
2023
ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದರು.

 ಐದು ವರ್ಷ ಸುಭದ್ರ ಸರ್ಕಾರ-
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ.

  2013 ರಲ್ಲಿ 2023 ರಲ್ಲಿಯೂ  ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ.

“‘ನಾನುಹೋದರೆ ಹೋದೇನುಅಂತ ಕನಕದಾಸರು ಹೇಳಿದ್ದರು. ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

 

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ