LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಮೈಸೂರು :ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಬ್ರಾತೃತ್ವ ನೆಲೆಸಿಲ್ಲ. ಏಕೆ ಎನಗನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿಯ ಮೊದಲ ದಿನ‌ ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದ್ದರು. ಅದರಲ್ಲಿ ಅವರು, ಅಸಮಾನತೆ, ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಅಸಮಾನತೆ ಅಳಿಸದಿದ್ದರೆ , ಅಸಮಾನತೆಗೆ ಒಳಗಾದ ಜನ ಪ್ರಜಾಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆ" ಎಂದು ಅಂಬೇಡ್ಕರ್ ಎಚ್ಚರಿಸಿದ್ದರು.

ಇದು ಪ್ರತಿಯೊಬ್ಬ ಅಧಿಕಾರಿಗೆ ನೀಡಿರುವ ಎಚ್ಚರಿಕೆ. ಪ್ರಜಾಪ್ರಭುತ್ವದ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಜವಾಬ್ದಾರಿ ನಿರ್ವಹಿಸದಿದ್ದರೆ ಏನಾಗುತ್ತದೆ ಎನ್ನುವುದನ್ನು ಅಂಬೇಡ್ಕರ್ ಎಚ್ಚರಿಸಿದ್ದಾರೆ ಎಂದರು.

ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಬುದ್ದನಿಂದ, ಬಸವಣ್ಣ, ಅಂಬೇಡ್ಕರ್ ಎಲ್ಲರೂ ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದರೂ ಜಾತಿ ಹೋಗಿಲ್ಲ . ಅದಕ್ಕೇ ಲೋಹಿಯಾ ಅವರು, ನಮ್ಮ ಸಮಾಜ ಚಲನೆ ರಹಿತವಾದ ವ್ಯವಸ್ಥೆ ಎಂದರು. ಎಲ್ಲರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಸಮಾಜದಲ್ಲಿ ಚಲನಶೀಲತೆ ಬರುತ್ತದೆ ಎಂದರು.

KAS ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ನಿಮಗೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಕೊಳ್ಳುವ ಶಕ್ತಿ ಹೆಚ್ಚಿರುವ ಸಮಾಜ ಆರ್ಥಿಕವಾಗಿ ಪ್ರಗತಿ ಕಾಣುತ್ತದೆ. ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿರುವುದು ಹೇಗೆ ಎನ್ನುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದರು.

ಕೋಮುಗಲಭೆ, ಸುಳ್ಳು ಸುದ್ದಿ, ಜಾತಿ ಶೋಷಣೆ, ಧಾರ್ಮಿಕ ಶೋಷಣೆಗಳು ಇರುವವರೆಗೆ ಅಸಮಾನತೆ ಇರುತ್ತದೆ ಎಂದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಿಮ್ಮ ಮತ್ತು ನಮ್ಮ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ನಾವು ಈ ಸಮಾಜದ ಖುಣಿಗಳಾಗೋಣ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉಸ್ತುವಾರಿ ಕಾರ್ಯದರ್ಶಿ ರಣದೀಪ್, ಕೆ.ಎ.ಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ