Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಿಯೊಬ್ಬರೂ ಕಾನೂನು ಮಾಹಿತಿ ಪಡೆಯುವುದು ಅವಶ್ಯಕ 

ಬೆಳಗಾವಿ :

ರಾಜಾ ಲಖಮಗೌಡ ಕಾನೂನು ಮಹಾ ವಿದ್ಯಾಲಯ, ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರಡಿಗುದ್ದಿ ಗ್ರಾಮ ಪಂಚಾಯತ್ ವತಿಯಿಂದ ಉಚಿತ ಕಾನೂನು ಅರಿವು ಮತ್ತು ಕಾರ್ಯಕ್ರಮವನ್ನು ಕರಡಿಗುದ್ದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜನರಲ್ಲಿ ಕಾನೂನಿನ ಕುರಿತು ಸರಿಯಾದ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ.ಕಾನೂನು ಬಗ್ಗೆ ತಿಳಿವಳಿಕೆ ಕೊರತೆಯಿಂದಲೇ  ವ್ಯವಸ್ಥೆಯ ಕುರಿತು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಇದನ್ನು ನಿವಾರಿಸಲು ಹಳ್ಳಿ-ಹಳ್ಳಿಗಳಲ್ಲಿ ಉಚಿತ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಹಿರಿಯ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ನವೀನ್ ಕೆ ಪ್ರೊಫೆಷನಲ್ ಪಿಎಸ್ಐ ಪೊಲೀಸ್ ಠಾಣೆ ಮಾರಿಹಾಳ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಪ್ರತಿಮಾ ಜೋಶಿ ಮಹಿಳೆಯರ ಹಕ್ಕುಗಳ ಬಗ್ಗೆ, ವರದಕ್ಷಿಣೆ ಕಾಯ್ದೆ,ಸಮಾನ ವೇತನ ಕಾಯ್ದೆ, ಉಚಿತ ಕಾನೂನು ನೆರವಿನ ಬಗ್ಗೆ, ಮಹಿಳೆಯರ ಕೌಟುಂಬಿಕ ಹಿಂಸೆ ಇತ್ಯಾದಿ ಕಾನೂನುಗಳ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ
ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ. ಡಿ.ಪ್ರಸನ್ನ ಕುಮಾರ್ ಉಚಿತ ಕಾನೂನು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಸಂಯೋಜಕ ಚೇತನ್ ಕುಮಾರ್ ಟಿಎಂ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಕಾಂತ್ ಸಿಎಂ ಮತ್ತು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರ ಗೌಡ ಪಾಟೀಲ ಹಾಗೂ ನೇಸರ್ಗಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಲಪ್ಪ ನೇಸರಗಿ ಹಾಗೂ ಸಹಾಯಕ ಪ್ರಾಧ್ಯಾಪಕ ಪ್ರೀತಮ್ ರೇವಣಕರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಶಿಬಿರವು ಜನರಲ್ಲಿ ಕಾನೂನು ಜಾಗೃತಿ ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿ ನೆರವಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ತಮ್ಮ ಹಕ್ಕುಗಳ ಕುರಿತು ತಿಳಿದುಕೊಂಡು , ಅಗತ್ಯವಿದ್ದಲ್ಲಿ ಕಾನೂನು ಸಹಾಯ ಪಡೆಯುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.  ಮೂರನೇ ವರ್ಷದ ಕಾನೂನು ವಿದ್ಯಾರ್ಥಿನಿ ಸಂಜನಾ ಇಟಗಿ ನಿರೂಪಿಸಿದರು. ಕಾನೂನು ನೆರವು ಕೇಂದ್ರದ ವಿದ್ಯಾರ್ಥಿ ಕಾರ್ಯದರ್ಶಿ ಸಚಿನ ಕೋಟಗಿ ವಂದಿಸಿದರು. ಶಶಿಧರ ಸಸಾಲಟ್ಟಿ ಮತ್ತು ಪ್ರವೀಣ್ ಕಾಂಬಳೆ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ