Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಸಂಘದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡಿ: ಗುಂಡಕನಾಳಶ್ರೀ

 

ತಾಳಿಕೋಟೆ : ಜನರ ನಂಬಿಕೆಯೇ ಸಂಘದ ನಿಜವಾದ ಬಂಡವಾಳ, ಸದಸ್ಯರ ವಿಶ್ವಾಸವಿದ್ದರೆ ಯಾವುದೇ ಸಂಘ ಬೆಳವಣಿಗೆ ಆಗಲು ಸಾಧ್ಯವಿದೆ ಎನ್ನುವುದಕ್ಕೆ ಈ ಸಂಘದ ಇಂದಿನ ಪ್ರಗತಿ ಹಾಗೂ ಇದರ ಹಿಂದೆ ನಿಂತಿರುವ ನೂರಾರು ಸದಸ್ಯರ ವಿಶ್ವಾಸವೇ ಸಾಕ್ಷಿ ಎಂದು ಗುಂಡಕನಾಳ ಬ್ರಹನ್ಮಠದ ಪರಮ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

 ತಾಲೂಕಿನ ಗುಂಡಕನಾಳ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಸರ್ವ ಸಾಧಾರಣ ಸಭೆಯ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದ ಅವರು ಸಂಘದಿಂದ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿಸಬೇಕು ಇದು ಸಂಘದ ಬೆಳವಣಿಗೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ ಅವರು ನಿಮ್ಮೆಲ್ಲರ ಸಹಕಾರದಿಂದ ಸಂಘವು ಪ್ರಗತಿ ಕಡೆಗೆ ಸಾಗುತ್ತಿದೆ ಮುಂದೆಯೂ ಇದೇ ರೀತಿಯ ಮುಂದೆ ಸಾಗಲಿ ಎಂದು ಆಶಿಸಿದರು.

 ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಮಲ್ಲನಗೌಡ ಬಿರಾದಾರ ಅವರು ಮಾತನಾಡಿ ಗ್ರಾಮೀಣ ಭಾಗದ ರೈತಾಪಿ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸಹಕಾರಿ ಸಂಘದಲ್ಲಿ ಹಲವಾರು ಯೋಜನೆಗಳಿವೆ ಇದರ ಸದುಪಯೋಗವನ್ನು ರೈತರು ಮಾಡಿಕೊಳ್ಳಬೇಕೆಂದರು.

 ಸಂಘದ ಮುಖ್ಯ ಕಾರ್ಯನಿರ್ವಾಹಕ ಎಸ್.ಬಿ. ರಾಮಗಿರಿಮಠ ಅವರು ವಾರ್ಷಿಕ ವರದಿಯನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಗುರಣ್ಣಗೌಡ ಬಿರಾದಾರ, ನಿರ್ದೇಶಕರಾದ ಬಸನಗೌಡ ಹಳ್ಳಿ ಪಾಟೀಲ,ಪ್ರಭುಗೌಡ ಪಾಟೀಲ, ಬಸವರಾಜ ಬಿರಾದಾರ, ಅಲ್ಲಿಸಾ ಪಿಂಜಾರ, ಉಸ್ಮಾನಸಾ ಮುಲ್ಲಾ, ಮಲ್ಲಣ್ಣ ಅಸ್ಕಿ, ಹಣಮಂತ ಕೊಡಗಾನೂರ, ನಿರ್ದೇಶಕೀಯರಾದ ಕಸ್ತೂರಿಬಾಯಿ ಭೀ.ಪಾಟೀಲ, ನಿರ್ಮಲಾ ಚ.ಪಾಟೀಲ, ಶಾಂತಮ್ಮ ಬ.ಗಬಸಾವಳಗಿ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ