Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಭಾವುಕರಾದ ಜಿ. ಪರಮೇಶ್ವರ್‌

ತುಮಕೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (G Parameshwar) ಅವರು ಪಾವಗಡದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (Venkataramanappa) ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ನಿಧನರಾಗಿದ್ದರು. ಬಳಿಕ ಮಾತನಾಡಿದ ಪರಮೇಶ್ವರ್‌, ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ವೆಂಕಟರಮಣಪ್ಪ ಅವರು ಸರಳ, ಸಜ್ಜನ ಹಾಗೂ ಜನಪರ ರಾಜಕಾರಣಿಯಾಗಿದ್ದು, ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದರು ಎಂದು ಸ್ಮರಿಸಿದರು. ತುಮಕೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಪರ ಹೋರಾಟ ನಡೆಸಿ ಅಪಾರ ಜನಬೆಂಬಲ ಗಳಿಸಿದ್ದ ಅವರು, ಸಚಿವರಾಗಿದ್ದ ಅವಧಿಯಲ್ಲಿ ಜನೋಪಯೋಗಿ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದರು ಎಂದರು. ಅವರ ಪುತ್ರ ಹೆಚ್‌.ವಿ. ವೆಂಕಟೇಶ್ ಈಗ ಪಾವಗಡ ಕ್ಷೇತ್ರದ ಶಾಸಕರಾಗಿದ್ದರೂ, ಜನರು ಇನ್ನೂ ವೆಂಕಟರಮಣಪ್ಪ ಅವರನ್ನು “ಶಾಸಕರು” ಎಂದೇ ಪ್ರೀತಿಯಿಂದ ಕರೆಯುತ್ತಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೂ, ಜಿಲ್ಲೆಯ ರಾಜಕೀಯ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ದುಃಖ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ