LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ

ನವದೆಹಲಿ : ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ.

'ವೈಟ್ ಕಾಲರ್' ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ.

ಬೆಳಿಗ್ಗೆ 5 ಗಂಟೆ ಅಧಿಕಾರಿಗಳು ದೆಹಲಿಯಲ್ಲಿರುವ ವಿಶ್ವವಿದ್ಯಾಲಯದ ಪ್ರಧಾನ ಕಚೇರಿ ಮತ್ತು ಸಂಸ್ಥೆಯ ಟ್ರಸ್ಟಿಗಳ ಮೇಲೆ ದಾಳಿ ನಡೆಸಲಾಗಿದೆ. ವಿಶ್ವವಿದ್ಯಾಲಯದ ಅಧ್ಯಕ್ಷ ಜಾವೇದ್ ಅಹ್ಮದ್ ಸಿದ್ದಿಕಿ ಅವರನ್ನು ಅವರ ನಿವಾಸದ ಮೇಲೂ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಭಯೋತ್ಪಾದಕ ಘಟಕಗಳೊಂದಿಗೆ ಸಂಪರ್ಕ ಹೊಂದಿರುವ ವಿಚಾರ ಬೆಳಕಿಗೆ ಬಂದ ನಂತರ ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಅಲ್-ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವವನ್ನು ಈಗಾಗಲೇ ರದ್ದುಗೊಳಿಸಿದೆ. ವಿಶ್ವವಿದ್ಯಾಲಯದ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಹಾಗೂ ನಕಲಿ ದಾಖಲೆಗಳಿಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ ಕೆಲ ದಿನಗಳ ನಂತರ ಇಡಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026