LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ :  ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ.15 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ: ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ.!ಇಂದಿನ ವಚನ: --ಅಕ್ಕಮ್ಮ..!ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.!ಸರಕಾರ 56432 ಹುದ್ದೆಗಳ ಭರ್ತಿಗೆ ಬಿಜೆಪಿ ಮುಖಂಡರ ಅಭಿಪ್ರಾಯ ಹೀಗಿದೆ.!ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.!