LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿದ್ದು ನಿವಾಸದಲ್ಲಿ ಡಿಕೆಶಿ; Breakfast ಮೀಟಿಂಗ್ ನಲ್ಲಿ ಮುಖಾಮುಖಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ನಡುವಲ್ಲೇ ಬ್ರೇಕ್’ಫಾಸ್ಟ್ ಮೀಟಿಂಗ್ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿದ್ದು, ಈ ಭೇಟಿ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ.

ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು.

ಇದೀಗ ಸ್ಪೆಷಲ್‌ ರೂಮ್‌ನಲ್ಲಿ ಕುಳಿತಿರುವ ಇಬ್ಬರೂ ನಾಯಕರು ಬ್ರೇಕ್‌ಫಾಸ್ಟ್‌ ಶುರು ಮಾಡಿದ್ದಾರೆ. ಅಲ್ಲಿಯೇ ಇಬ್ಬರೂ ಒನ್‌ ಟು ಒನ್‌ ಮೀಟಿಂಗ್‌ ಶುರು ಮಾಡಿದ್ದು, ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಹಿನ್ನೆಲೆ ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ 3 ಕೆಎಸ್‌ಆರ್‌ಪಿ ತುಕಡಿ, 2 ಬಸ್ ನಿಯೋಜನೆ ಮಾಡಲಾಗಿದೆ.

ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ್ದು, ಅದರಂತೆ ಸಿಎಂ ನಿವಾಸದಲ್ಲಿ ಬ್ರೇಕ್ ಫಾಸ್ಟ್‌ ಮೀಟಿಂಗ್ ನಡೆಯುತ್ತಿದೆ.

ರಾಜ್ಯ ಬಿಕ್ಕಟ್ಟಿನ ಬಗ್ಗೆ ತನ್ನ ಅಂತಿಮ ನಿಲುವು ಪ್ರಕಟಿಸುವ ಮುನ್ನ ಉಭಯ ನಾಯಕರು ಹೊಂದಾಣಿಕೆಗೆ ಅಂತಿಮ ಯತ್ನ ನಡೆಸಲಿ ಎಂಬ ಉದ್ದೇಶದಿಂದ ಹೈಕಮಾಂಡ್ ಈ ನಿಲುವು ತಳೆದಂತಿದ್ದು, ಹೀಗಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ ನಡೆಯುತ್ತಿದೆ.

ಸಭೆಯಲ್ಲಿ ಕೇವಲ ಸಿಎಂ ಹಾಗೂ ಡಿಸಿಎಂ ಮಾ ಇರಲಿದ್ದು, ಸಭೆಯ ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಮೂಡಿಸಿದೆ.

ಬ್ರೇಕ್ ಫಾಸ್ಟ್ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೈಕಮಾಂಡ್ ತೀರ್ಮಾನಕ್ಕೆ ತಾವು ಬದ್ಧ ಎಂಬ ನಿಲುವನ್ನು ಮತ್ತೆ ವ್ಯಕ್ತಪಡಿಸಿದ್ದರು. ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲೂ ಇದೇ ನಿಲುವು ಹೇಳುವುದಾಗಿ ಸ್ಪಷ್ಟಪಡಿಸಿದ್ದರು.

ಇನ್ನು ಡಿಸಿಎಂ ಕೂಡ ಎರಡೂವರೆ ವರ್ಷ ಒಪ್ಪಂದ ಪಾಲನೆಯಾಗಬೇಕು ಎಂಬ ನಿಲುವನ್ನು ಈ ಉಪಾಹಾರ ಸಭೆಯಲ್ಲಿ ಸಡಿಲಿಸುವ ಸಾಧ್ಯತೆ ತೀರಾ ಕಡಿಮೆ ಎಂದೇ ಹೇಳಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026