LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!

ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಸಂಬಂಧದಲ್ಲಿ ಬಿರುಕು ಮತ್ತಿತರ ವದಂತಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಈಗ ಬಿಗ್ ಬಿ ಮೊಮ್ಮಗಳು ಆರಾಧ್ಯ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.

ನನ್ನ ಆರೋಗ್ಯ ಕುರಿತು ಹಲವು ವೆಬ್ ಸೈಟ್ ಹಾಗೂ ಯೂ ಟ್ಯೂಬ್ ಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಹಿಂದೆ 2023ರ ಏಪ್ರಿಲ್ 20 ರಂದು ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಆಕೆಯ ಆರೋಗ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಹಲವಾರು ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿತ್ತು. ಇಂತಹ ವಿಡಿಯೋಗಳನ್ನು ಯೂ ಟ್ಯೂಬ್ ನಿಂದ ತೆಗೆದುಹಾಕುವಂತೆ ಗೂಗಲ್ ಗೆ ಸೂಚನೆ ನೀಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!