ಬೆಂಗಳೂರು:
‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಚಂದ್ರು ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.
ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.