Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕನ್ನಡದ ಪ್ರಸಿದ್ದ ಸಾಹಿತ್ಯ ವಿಮರ್ಶಕ ಪ್ರೊ. ಜಿ.ಎಚ್‌. ನಾಯಕ್‌ ಇನ್ನಿಲ್ಲ

ಸುದ್ದಿಮೂಲ ವಾರ್ತೆ
ಮೈಸೂರು, ಮೇ 26: ಕನ್ನಡ ಸಾಹಿತ್ಯ ಸ್ವಾರಸ್ವತ ಲೋಕದಲ್ಲಿ ಮೇರು ಸಾಧನೆ ಮಾಡಿ ಪ್ರಸಿದ್ದರಾಗಿದ್ದ ಹಿರಿಯ ಸಾಹಿತಿ ಪ್ರೊ.ಜಿ.ಎಚ್‌.ನಾಯಕ್‌ ಬಹುಕಾಲದ ಅನಾರೋಗ್ಯದ ನಂತರ ಶುಕ್ರವಾರ ಇಹಲೋಕ ತ್ಯಜಿಸಿದರು.

ತಮ್ಮ ನೇರ ನಡೆ, ನುಡಿಯ ಮಾತು ವಾಸ್ತವದ ನೆಲೆಯ ವಿಮರ್ಶೆಯಿಂದ ಕನ್ನಡ ಸಾಹಿತ್ಯ ಲೋಕದಲ್ಲಿ
ಪ್ರಸಿದ್ದರಾಗಿದ್ದ ಅವರಿಗೆ  ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ ಪತ್ನಿ,
ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ಕೀರ್ತೀ ಇದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935 ಸೆಪ್ಟಂಬರ್‌ 18 ರಂದು ಜನಿಸಿದ್ದ ಅವರಿಗೆ 88
ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರಿಗರೇ ಆಗಿ
ಹೋಗಿದ್ದರು.

ಕನ್ನಡ ಸಾಹಿತ್ಯ ಲೋಕದಲ್ಲಿ ಜಿ.ಎಚ್.ನಾಯಕ ಎಂದು ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ . ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು.

ಬಾಳು ಎನ್ನುವುದು ಅವರ ಆತ್ಮಕಥನ. ಸಮಕಾಲೀನ (1973), ಅನಿವಾರ್ಯ (1980), ನಿರಪೇಕ್ಷೆ
(1984), ನಿಜದನಿ (1988), ವಿನಯ ವಿಮರ್ಶೆ 1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ
ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ
ಸಮೀಕ್ಷೆ (2009), ಉತ್ತರಾರ್ಧ (2001) ಅವರ ಪ್ರಮುಖ ಕೃತಿಗಳು.

ಉತ್ತರಾರ್ಧ ಕೃತಿಗೆ 2014 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ನಿಜದನಿ ವಿಮರ್ಶಾ ಕೃತಿಗೆ ವಿ.ಎಂ.ಇನಾಂದಾರ ಸ್ಮಾರಕ ಜಿ.ಎಚ್‌.ನಾಯಕ ಅವರಿಗೆ ಲಭಿಸಿವೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ (ಸಂಪುಟ – 1,2 ) ಗಳಿಗೆ ಸಂಪಾದಕರೂ ಆಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ