LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಹಲೋಕ ತ್ಯಜಿಸಿದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್

ಬೆಂಗಳೂರು:  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ನೊಂದಿಗೆ ಹೋರಾಟ ನಡೆಸುತ್ತಿದ್ದರು.

ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ ಸಿಗದಷ್ಟು ಬದಲಾವಣೆಗೆ ಒಳಗಾಗಿದ್ದರು. ತಮ್ಮ ಚಿಕಿತ್ಸೆಗೆ ಸಹಾಯಕ್ಕಾಗಿ ಅವರು ಸಾರ್ವಜನಿಕವಾಗಿ ಮನವಿ ಮಾಡಿದ್ದರು. ಈ ವೇಳೆ ನಟ ಯಶ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗ ಸೇರಿದಂತೆ ಹಲವರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು.

ತಮ್ಮ ಜೀವನದ ಕೊನೆಯ ದಿನಗಳವರೆಗೂ ಹೋರಾಟ ತೊರೆಯದ ಹರೀಶ್ ರಾಯ್ ಅವರನ್ನು ಹಲವಾರು ಸಿನಿತಾರೆಯರು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಹಲವು ಯೂಟ್ಯೂಬರ್‌ಗಳೂ ಸಹ ಅವರ ಬಳಿಗೆ ತೆರಳಿ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಚಿರನಿದ್ರೆಗೆ ಶರಣಾಗಿದ್ದಾರೆ.

ಕರಾವಳಿ ಮೂಲದ ಹರೀಶ್ ರಾಯ್ ಅವರು 90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ಖಳನಟರಾಗಿ ಹೊರಹೊಮ್ಮಿದ್ದರು. ‘ಓಂ’, ‘ಜೋಡಿ ಹಕ್ಕಿ’, ‘ತಾಯವ್ವ’, ‘ನಲ್ಲ’, ‘ಜಾಫರ್ ಅಲಿಯಾಸ್ ಮುರ್ಗಿ ಜಾಫರ್’, ‘ಭೂಗತ’, ‘ರಾಜ್ ಬಹದ್ದೂರ್’, ‘ಸಂಜು ವೆಡ್ಸ್ ಗೀತಾ’, ‘ಕೆಜಿಎಫ್ ಚಾಪ್ಟರ್ 1 ಮತ್ತು 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದಿಂದ ಸ್ಯಾಂಡಲ್‌ವುಡ್‌ನಲ್ಲಿ ಛಾಪು ಮೂಡಿಸಿದ್ದರು.

ಹರೀಶ್ ರಾಯ್ ಅವರು ತಮಿಳು ಚಿತ್ರರಂಗದಲ್ಲಿಯೂ ಅಭಿನಯಿಸಿದ್ದರು. ಕೆಲವು ವರ್ಷಗಳ ಹಿಂದೆ ಒಂದು ಪ್ರಕರಣದ ಹಿನ್ನೆಲೆ ಜೈಲು ಪಾಲಾಗಿದ್ದ ಸಂದರ್ಭದಲ್ಲೂ, ತಮ್ಮ ಜೀವನದ ಕಷ್ಟದ ದಿನಗಳನ್ನು ಅವರು ಸ್ವತಃ ಸ್ಮರಿಸಿಕೊಂಡು ಭಾವುಕರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರ ನಿಧನ ತುಂಬಲಾರದ ನಷ್ಟವನ್ನುಂಟುಮಾಡಿದೆ. ಸ್ಯಾಂಡಲ್‌ವುಡ್‌ನ “ಖಳನಟ” ಎಂದು ಕರೆಯಲ್ಪಟ್ಟ ಈ ಸರಳ ವ್ಯಕ್ತಿ, ತಮ್ಮ ಬದುಕಿನ ಕೊನೆಯ ಕ್ಷಣವರೆಗೂ ಹೋರಾಡಿದ ಧೈರ್ಯಶಾಲಿ ಕಲಾವಿದನಾಗಿ ಅಭಿಮಾನಿಗಳ ಮನಗಳಲ್ಲಿ ಶಾಶ್ವತವಾಗಿ ಉಳಿಯುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026