Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಿಕೆವಿಕೆ ಆವರಣದಲ್ಲಿ ರೈತ ಸಂತೆ: ತಾಜಾ ಹಣ್ಣು, ಅಣಬೆ ಆಕರ್ಷಣೆ

ಬೆಂಗಳೂರು: ರೈತರು ಬೆಳೆದ ಕಲ್ಲಂಗಡಿ, ಹಲಸು, ಸಪೋಟ, ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿರುವ ಮಿಲ್ಕಿ ಅಣಬೆ ಹಾಗೂ ನಾಟಿಕೋಳಿ ಮೊಟ್ಟೆಗಳು ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳು ರೈತ ಸಂತೆಯಲ್ಲಿ ಸಾರ್ವಜನಿಕರನ್ನು ಸೆಳೆದವು. ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಶನಿವಾರ ಆಯೋಜಿಸಿದ್ದ ವರ್ಷದ ಮೊದಲ ರೈತ ಸಂತೆಯಲ್ಲಿ ಹೂವು, ಹಣ್ಣು, ತೆಂಗಿನಕಾಯಿ, ತರಕಾ

ಬಿಳಿಬಣ್ಣ ದಪ್ಪಕಾಂಡ ಮತ್ತು ರುಚಿಕರವಾದ ತಾಜಾ ಮಿಲ್ಕಿ ಅಣಬೆಗಳು ರಾಸಾಯನಿಕ ಮುಕ್ತವಾಗಿದ್ದು, ರೈತರು ಸ್ವಯಂ ಬೆಳೆಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿದರು. ಇದರಿಂದ ರೈತರಿಗೆ ಉತ್ತಮ ಆದಾಯ ದೊರೆಯುವುದರ ಜೊತೆಗೆ ಗ್ರಾಹಕರಿಗೆ ಗುಣಮಟ್ಟದ ಅಣಬೆಗಳು ದೊರೆತವು.

'ಸ್ವಚ್ಛ ಪರಿಸರದಲ್ಲಿ ರಾಸಾಯನಿಕ ಹಾಗೂ ಕೃತಕ ಆಹಾರವಿಲ್ಲದೇ ಬೆಳೆಸಿದ ದೇಶಿ ಕೋಳಿಗಳ ನಾಟಿ ಮೊಟ್ಟೆಗಳಿಗೆ ಹೆಚ್ಚು ಬೇಡಿಕೆ ಇತ್ತು. ಈ ಮೊಟ್ಟೆಗಳು ಪ್ರೋಟೀನ್‌, ವಿಟಮಿನ್‌ಗಳ ಜೊತೆಗೆ ಖನಿಜಾಂಶಗಳಿಂದ ಸಮೃದ್ಧವಾಗಿದ್ದು, ಮಕ್ಕಳು, ಗರ್ಭಿಣಿಯರು ಹಾಗೂ ವೃದ್ಧರ ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿವೆ' ಎಂದು ವಿಶ್ವವಿದ್ಯಾಲಯದ ಸಿಬ್ಬಂದಿ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ಧಿ ಸಾಮಗ್ರಿಗಳು, ಪ್ರಮುಖವಾಗಿ ತೋಟಗಾರಿಕಾ ಬೆಳೆಗಳಾದ ಹಣ್ಣುಗಳಾದ ಮಾವು, ನೇರಳೆ, ಹಲಸು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು ಕೃಷಿ ಯಂತ್ರೋಪಕರಣಗಳು ಖರೀದಿಗೆ ಅವಕಾಶ ನೀಡಲಾಗಿತ್ತು. ಮಕ್ಕಳು ಎತ್ತಿನ ಬಂಡಿಯ ಸವಾರಿ ಮಾಡಿದರು. ಸಂತೆಯ ಅಂಗಳದಲ್ಲಿ ವಿವಿಧ ಜಾನುವಾರುಗಳು ಗಮನ ಸೆಳೆದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ