Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೊಳಚೆ ನೀರನ್ನು ಶುದ್ದೀಕರಿಸಲು
STP ಘಟಕ ಸ್ಥಾಪಿಸಬೇಕು. ಎಸ್‌ಟಿಪಿ ಘಟಕ ಸ್ಥಾಪಿಸುವವರೆಗೂ ಹೋರಾಟ ನಿರಂತರವಾಗಿ ಇರುತ್ತದೆ. ಸಾಂಕೇತಿಕವಾಗಿ  ಆಗಸ್ಟ್ 15ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡಲು ನಮ್ಮ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ವೇದಿಕೆಯ ಪ್ರಮುಖರಾದ ಸತೀಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿಯ ನೀರು ಸಂಪೂರ್ಣ ಕಲುಷಿತಗೊಂಡಿದ್ದು ಈ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೇವೆ.ಆದರೆ ಸರಕಾರ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಸರ್ಕಾರ ಕಳೆದ ಬಾರಿ ಹೋರಾಟದ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಯ ಕಚೇರಿಯಲ್ಲೂ ಸಹ ಸಭೆ ನಡೆಸಿ ಚಳುವಳಿ ಕೈಬಿಡಿ ಎರಡು ದಿನಗಳಲ್ಲಿ ನಿಮ್ಮ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ಕೊಟ್ಟರು. ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಈ ಹಿನ್ನಲೆ ನಮ್ಮ ಹೋರಾಟದ ಅಂಗವಾಗಿ ಒಂದು ದಿನದ ಸಂಕೇತಿಕ ಸತ್ಯಗ್ರಹ ಮಾಡಲು ಮುಂದಾಗಿದ್ದೇವೆ ಎಂದರು.

ವೇದಿಕೆಯ ಮುಖಂಡ ವಸಂತ್ ಕುಮಾರ್ ಮಾತನಾಡಿ  ನಮ್ಮ ಹೋರಾಟ ನಿತ್ಯ ನಿರಂತರವಾಗಿ ಸಾಗುತ್ತಿದೆ. ಮುಖ್ಯವಾಗಿ ನಗರದಿಂದ ನಮ್ಮ ಊರಿನ ಕೆರೆಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ದೀಕರಿಸಲು STP ಘಟಕ ಸ್ಥಾಪಿಸಬೇಕು ಎಂಬ ಅಗ್ರಹ ಕಳೆದ ಹಲವು ವರ್ಷಗಳಿಂದ ಮಾಡುತ್ತಿದ್ದರೂ ಈವರೆಗೂ ಯಾವ ಕಾರ್ಯ ಪ್ರಾರಂಭವಾಗಿಲ್ಲ. ಎಸ್‌ಟಿಪಿ ಘಟಕ ಸ್ಥಾಪಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ನಮ್ಮ ಹೋರಾಟ ಜೀವಂತವಾಗಿದೆ ಎಂದು ತೋರಿಸುವ ಸಲುವಾಗಿ  ಆಗಸ್ಟ್ 15ರಂದು  ನಗರದ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆ ಮುಂದೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಮಾಡಲು ಹೋರಾಟ ಸಮಿತಿ ತೀರ್ಮಾನಿಸಿದ್ದು ಈ ಮೂಲಕ ಅಧಿಕಾರಿಗಳಿಗೆ ಎಚ್ಚರಿಸುವ ಕಾರ್ಯ ಮಾಡಲಿದ್ದೇವೆ. ಎಸ್ ಟಿ ಪಿ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗದೆ ಇದ್ದಾರೆ ಮುಂದೆ ನಮ್ಮ ಹೋರಾಟ ಉಗ್ರ ರೂಪತಾಳಲಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಅರ್ಕಾವತಿ ನದಿ ಪಾತ್ರ ಸಂರಕ್ಷಣೆ ಹೋರಾಟ ಸಮಿತಿಯ ಪ್ರಮುಖರಾದ ಕಾಳೇಗೌಡ, ಅಂಜನ್ ಮೂರ್ತಿ, ರಾಮಕೃಷ್ಣ , ಅಂಜಿನಪ್ಪ, ಸುವಂತಪ್ಪ ಸೇರಿದಂತೆ ಹಲವು ರೈತ ಮುಖಂಡರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ