Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Traveling Tips

ಸರಸ್ವತಿ ಪುತ್ರನಿಗೆ ಅಂತಿಮ ನಮನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮವಿಭೂಷಣ, ಸಾಹಿತ್ಯಲೋಕದ ಮೇರು ಪರ್ವ ದಿವಂಗತ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1999 ಕನಕಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಂಡಿದ್ದೆವು. ಆಗ ನಾವು ಎಸ್‌.ಎಲ್‌.ಭೈರಪ್ಪನವರನ್ನು ಬನಶಂಕರಿಯಿಂದ ಮೆರವಣಿಗೆಯಲ್ಲಿ ಕರೆದುಕೊಂಡು ಬಂದಿದ್ದೆವು. ಅವರು ದಿಟ್ಟ, ನೇರ ನುಡಿಯ ವ್ಯಕ್ತಿತ್ವದವರಾಗಿದ್ದರು ಮತ್ತು ಬರವಣಿಗೆಯಲ್ಲಾಗಲಿ, ಮಾತಿನಲ್ಲಾಗಲಿ ನಿರ್ಭೀತರಾಗಿದ್ದರು. ಅವರ ಕಾದಂಬರಿಗಳು ಕೇವಲ ಕನ್ನಡ ಸಾಹಿತ್ಯಕ್ಕೆ ಸೀಮಿತವಾಗದೆ, ಅನೇಕ ಭಾಷೆಗಳಿಗೆ ಅನುವಾದಗೊಂಡು ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿವೆ.

ಭೈರಪ್ಪನವರು ತಮ್ಮ ಬರವಣಿಗೆಯಲ್ಲಿ ನಮ್ಮ ಸಂಸ್ಕೃತಿಯನ್ನು ಬಹಳವಾಗಿ ಎತ್ತಿ ಹಿಡಿದಿದ್ದಾರೆ. ಅವರಿಗೆ ಪದ್ಮಶ್ರೀ, ಪದ್ಮವಿಭೂಷಣ ಸೇರಿದಂತೆ ಬಹಳಷ್ಟು ಪ್ರಶಸ್ತಿಗಳು ದೊರೆತಿವೆ. ದೇಶದ ಅನೇಕ ಗಣ್ಯರು ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಅವರ ಸಿದ್ಧಾಂತ, ನಿಲುವು ಮತ್ತು ನಡೆ ನಮ್ಮ ಸಾಹಿತ್ಯ ಲೋಕಕ್ಕೆ ಹಾಗೂ ಸಮಾಜದ ಎಲ್ಲ ವರ್ಗಕ್ಕೂ ಒಂದು ಮಾರ್ಗದರ್ಶನವಾಗಿದೆ.

ಇಂದು ನಾನು ನಮ್ಮೆಲ್ಲ ಕನ್ನಡ ಮಾಧ್ಯಮದವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಏಕೆಂದರೆ, ಒಬ್ಬ ಪ್ರಧಾನಿ ಅಥವಾ ರಾಷ್ಟ್ರಪತಿಗೆ ಯಾವ ರೀತಿ ಗೌರವ ಸಲ್ಲಿಸಲಾಗುತ್ತದೆಯೋ, ಅದೇ ರೀತಿ ನೀವು ನಮ್ಮ ಕನ್ನಡ ಭಾಷೆಯ ಒಬ್ಬ ದಿಗ್ಗಜರಿಗೆ ಗೌರವ ಸಲ್ಲಿಸಿದ್ದೀರಿ. ಅವರ ಸ್ಮಾರಕದ ವಿಚಾರವಾಗಿ ನಾನು ಮುಖ್ಯಮಂತ್ರಿಗಳ ಜೊತೆ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಎಲ್ಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ. ಸರ್ಕಾರದ ಪರವಾಗಿ, ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ನಮ್ಮೆಲ್ಲರ ಪರವಾಗಿ ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲೆಂದು ಡಿಸಿಎಂ ಶಿವಕುಮಾರ್ ಪ್ರಾರ್ಥಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ