LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ : ಶೀಲವಂತ ಶಿವಕುಮಾರ್

 

ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.  ಮತದಾರರು ಹೆಸರುಗಳನ್ನು  ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರುಗಳೊಂದಿಗೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ, ಜಗಳೂರು ಕ್ಷೇತ್ರದಲ್ಲಿ 2215 ಪುರುಷ, 1138 ಮಹಿಳಾ ಮತದಾರರು ಒಟ್ಟು 3353, ಹರಿಹರ ಕ್ಷೇತ್ರದಲ್ಲಿ 3193 ಪುರುಷ, 2501 ಮಹಿಳೆಯರು ಒಟ್ಟು 5694, ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 6683 ಪುರುಷ, 5780 ಒಟ್ಟು 12463, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2250 ಪುರುಷ , 2201 ಮಹಿಳೆಯವರು ಒಟ್ಟು 4451 ಹಾಗೂ ಮಾಯಕೊಂಡ ಕ್ಷೇತ್ರದಲ್ಲಿ  2253 ಪುರುಷ, 1525 ಮಹಿಳಾ ಮತದಾರರು ಒಟ್ಟು 3778 ಮತದಾರರಿದ್ದು ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಒಟ್ಟಾರೆಯಾಗಿ ದಾವಣಗೆರೆ ಜಿಲ್ಲೆಯಲ್ಲಿ 16594 ಪುರುಷ, 13145 ಮಹಿಳಾ ಮತದಾರರು ಸೇರಿದಂತೆ 29739 ಒಟ್ಟು ಅಂತಿಮ ಮತದಾರಿದ್ದಾರೆ ಎಂದು ತಿಳಿಸಿದರು.

ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾದ ಮತದಾರರು, ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ಕಛೇರಿಗಳಲ್ಲಿ ಹೆಸರುಗಳನ್ನು ಪರಿಶೀಲಿಸಿಕೊಳ್ಳುವುದು. ಹಾಗೂ ದಾವಣಗೆರೆ ನಗರ ಮತ್ತು ಕಸಬಾ ಹೊಬಳಿ ವ್ಯಾಪ್ತಿಯಲ್ಲಿರುವವರು  ಆಯುಕ್ತರು, ಮಹಾನಗರಪಾಲಿಕೆ, ದಾವಣಗೆರೆ ಕಚೇರಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ, ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026