Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಆರ್ಥಿಕವಾಗಿ ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ನೆರವು: ಕುಲಕರ್ಣಿ 

ದಿ. ೨೯ ರಂದು ತಾಳಿಕೊಟೆಯಲ್ಲಿ ರೈತ ಸಂಘದಿಂದ ದೇಣಿಗೆ ಸಂಗ್ರಹ




ತಾಳಿಕೋಟೆ,    ಆರ್ಥಿಕವಾಗಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ರೈತರಿಂದ ದೇಣಿಗೆ ಸಂಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಹಣ ರವಾನಿಸಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.
       ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟ ಪರಿಣಾಮ ರೈತರು ಬಿತ್ತನೆ ಮಾಡಿದ್ದ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ತಾಳಿಕೋಟೆ ಪಟ್ಟಣದಲ್ಲಿಯೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.
      ರೈತರ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದೆ. ಆದರೆ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಖಾತೆಗೆ ಕೇವಲ ೨,೫೦೦ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿರುವುದು ಸಮರ್ಪಕವಲ್ಲ. ಕೃಷಿಗಾಗಿ ಸಾಲ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕನಿಷ್ಠ ಪ್ರತಿ ಎಕರೆಗೆ ೨೫,೦೦೦ ಪರಿಹಾರ ನೀಡಬೇಕು ಎಂದು ಸಂಘವು ಒತ್ತಾಯಿಸಿತ್ತು. ಆದರೆ ಸರ್ಕಾರ ಅತ್ಯಲ್ಪ ಮೊತ್ತದ ಪರಿಹಾರ ನೀಡಲು ಮುಂದಾಗಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅರವಿಂದ ಕುಲಕರ್ಣಿ ಹೇಳಿದ್ದಾರೆ.
      ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಆರೋಪಿಸಿರುವ ಸಂಘ, ಸರ್ಕಾರಕ್ಕೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ರೈತರಿಂದಲೇ ಸಾಧ್ಯವಾದಷ್ಟು ದೇಣಿಗೆ ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ರವಾನಿಸಲು ಮುಂದಾಗಿದೆ. ಇದು ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಗಮನ ಸೆಳೆಯುವ ಹಾಗೂ ರೈತರ ಸಂಕಷ್ಟವನ್ನು ಸರ್ಕಾರದ ಮುಂದಿಡುವ ಸಾಂಕೇತಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.
       ಮಂಗಳವಾರದಿಂದ ಪ್ರಥಮ ಹಂತದಲ್ಲಿ ತಾಳಿಕೋಟೆ ಪಟ್ಟಣದಲ್ಲಿ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಿಸಲಾಗುವುದು. ನಂತರ ಬಸವನಬಾಗೇವಾಡಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ದೇಣಿಗೆ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
         ದೇಣಿಗೆ ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡುವ ಅಂಗವಾಗಿ ಮಂಗಳವಾರ ಬೆಳಿಗ್ಗೆ ೧೦.೩೦ಕ್ಕೆ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠಕ್ಕೆ ಆಗಮಿಸಬೇಕು. ಮಠದಲ್ಲಿ ಪೂಜೆ ಸಲ್ಲಿಸಿದ ಬಳಿಕ ದೇಣಿಗೆ ಸಂಗ್ರಹಣೆಗೆ ಚಾಲನೆ ನೀಡಲಾಗುವುದು. ರೈತರು ಹಾಗೂ ಸಂಘದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ ಹಾಗೂ ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಮನವಿ ಮಾಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ