Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Koppal

ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ

ಕೊಪ್ಪಳ ಅಕ್ಟೋಬರ್ 29: ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ’ (Financial Inclusion Saturation Campaign)ದ ವಿಶೇಷ ಜಾಗೃತಿ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಂಗಳವಾರ (ಅ. 27ರಂದು) ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಇದೇ ವೇಳೆ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರಾದ ಕೆ.ಮಾರುತಿ ಅವರು ಅಭಿಯಾನದ ಉದ್ದೇಶ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಿ, ಹಣಕಾಸು ಸೇವೆಗಳನ್ನು ಸಮಾಜದ ಕಟ್ಟಕಡೆಯ ನಾಗರಿಕನಿಗೂ ತಲುಪಿಸುವ ಉದ್ದೇಶದಿಂದ ಅಕ್ಟೋಬರ್ 21 ರಿಂದ ಡಿಸೆಂಬರ್ 31ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರಗಳಲ್ಲಿ ಬ್ಯಾಂಕ್ ಶಾಖೆಗಳು, ಗ್ರಾಮ ಪಂಚಾಯಿತಿ ಮತ್ತು ಪಿಡಿಒಗಳ ಸಹಯೋಗದಲ್ಲಿ ಸಾರ್ವಜನಿಕರಿಗೆ ಸ್ಥಳದಲ್ಲೇ ವಿವಿಧ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
*ಶಿಬಿರದಲ್ಲಿ ಸಿಗುವ ಪ್ರಮುಖ ಸೇವೆಗಳು:* ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿ.ಎಂ.ಎಸ್.ಬಿ.ವೈ) ಹಾಗೂ ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿ ನೋಂದಣಿ. ಪಿಎಂಜೆಜೆಬಿವೈ ಮತ್ತು ಪಿ.ಎಂ.ಎಸ್.ಬಿ.ವೈ ಯೋಜನೆಗಳಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವ ಸೌಲಭ್ಯ.
ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮತ್ತು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಅರ್ಜಿಗಳ ಸಂಗ್ರಹಣೆ. ಪ್ರಧಾನಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಮತ್ತು ಇತರೆ ಉಳಿತಾಯ ಖಾತೆಗಳಿಗೆ ಮರು-ಕೆವೈಸಿ (ರಿಕೆವೈಸಿ) ಹಾಗೂ ಹೊಸ ಸಿ-ಕೆವೈಸಿ ಸೃಷ್ಟಿ.
ದೀರ್ಘಕಾಲದಿಂದ ವ್ಯವಹಾರವಿಲ್ಲದೆ ಸ್ಥಗಿತಗೊಂಡಿರುವ (ಇನ್ಆಪರೇಟಿವ್) ಖಾತೆಗಳನ್ನು ಮರು ಚಾಲನೆಗೊಳಿಸುವುದು. ಬ್ಯಾಂಕ್ ಖಾತೆಗಳಿಗೆ ನಾಮಿನಿ ವಿವರ ನವೀಕರಣ ಹಾಗೂ ಹಕ್ಕು ಪಡೆಯದ ಠೇವಣಿಗಳ (ಅನ್ ಕ್ಲೇಮ್ಡ್ ಡಿಪಾಜಿಟ್ಸ್/ ಡಿಇಎಎಫ್) ಇತ್ಯರ್ಥಕ್ಕೆ ಅರ್ಜಿ ಸಲ್ಲಿಕೆ.
ಇದಲ್ಲದೆ ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ಸೌಲಭ್ಯ ಹಾಗೂ ಸೈಬರ್ ಭದ್ರತೆ ಕುರಿತು ಜಾಗೃತಿ ಮೂಡಿಸುವುದಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಶಿಬಿರಗಳಿಗೆ ಭೇಟಿ ನೀಡಿ ಈ ಎಲ್ಲಾ ಬ್ಯಾಂಕಿಂಗ್ ಸೇವೆಗಳನ್ನು ಪಡೆದುಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕಾಗಿ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ‌ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಜಿಲ್ಲಾಧಿಕಾರಿಗಳ ಕಚೇರಿಯ ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ