ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ.! ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಎಫ್ಐಆರ್.!
ಮಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ ನವಮಂಗಳೂರು ಬಂದರು ಪ್ರಾಧಿಕಾರ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿ ಗಲಾಟೆ ನಡೆಸಿದ್ದರು. ಅಲ್ಲದೇ ಅಲ್ಲಿನ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರು ಹೊರಹೋಗಲು ಬಿಡದೇ ಅವರನ್ನು ತಡೆದು ನಿಲ್ಲಿಸಿದ್ದಾರೆ.
ಗಲಾಟೆ ಬೆದರಿಕೆ ಹಾಕಿದ್ದಾರೆ. ಬೇರೆ ಕರ್ತವ್ಯಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದಾಗಲೂ ಅವರನ್ನು ತಡೆದು ನಿಲ್ಲಿಸಿ ವಾಗ್ವಾದ ನಡೆಸಿದ್ದಾರೆ. ಈ ಬಗ್ಗೆ ಎನ್.ಎಂ.ಪಿ.ಎ ಕಾರ್ಯದರ್ಶಿ ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.