Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಮಹಿಳೆ ದೂರು ಬಳಿಕ ಖಾಸಗಿ ಆಸ್ಪತ್ರೆ ವಿರುದ್ಧ FIR; ಶೌಚಾಲಯ ವಿಡಿಯೋ ಆರೋಪ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುರುಷ ಸಿಬ್ಬಂದಿಯೊಬ್ಬರು ಶೌಚಾಲಯದೊಳಗೆ ತನ್ನ ಫೋಟೊ ತೆಗೆದುಕೊಳ್ಳಲು ಅಥವಾ ವಿಡಿಯೋ ಚಿತ್ರೀಕರಿಸಲು ಯತ್ನಿಸಿದ್ದಾರೆ ಎಂದು 36 ವರ್ಷದ ಮಹಿಳೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ತಿಳಿಸಿದ್ದಾರೆ.

ಸರ್ಜಾಪುರ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಮೇ 21ರಂದು ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮಹಿಳೆ ಶೌಚಾಲಯ ಬಳಸುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರು ಅನುಮಾನಾಸ್ಪದವಾಗಿ ನಡೆದುಕೊಂಡಿದ್ದು, ಮೊಬೈಲ್ ಫೋನ್ ಮೂಲಕ ಫೋಟೊ ಅಥವಾ ವಿಡಿಯೋ ಸೆರೆಹಿಡಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾವು ಒಳಗಿದ್ದ ಸಮಯದಲ್ಲಿ ಆತ ತನ್ನ ಚಿತ್ರಗಳು ಅಥವಾ ವಿಡಿಯೋಗಳನ್ನು ದಾಖಲಿಸಿರಬಹುದೆಂಬ ಗಂಭೀರ ಅನುಮಾನ ವ್ಯಕ್ತಪಡಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಘಟನೆ ಗಮನಕ್ಕೆ ಬಂದ ತಕ್ಷಣ ಮಹಿಳೆ ಆತನನ್ನು ಪ್ರಶ್ನಿಸಿದ್ದು, ಬಳಿಕ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಗರ್ಭಿಣಿಯಾಗಿರುವ ತಾನು ಈ ಘಟನೆಯಿಂದ ಮಾನಸಿಕವಾಗಿ ಕುಗ್ಗಿದ್ದು, ಭಯ ಮತ್ತು ಅವಮಾನ ಅನುಭವಿಸಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ, ಆರೋಪಿ ಹಾಗೂ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರಿನ ಮೇರೆಗೆ, ಆರೋಪಿಯ ವಿರುದ್ಧ ಹಾಗೂ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 77 (ವಾಯುರಿಸಂ), 79 (ಮಹಿಳೆಯ ಘನತೆಗೆ ಧಕ್ಕೆ ಉಂಟುಮಾಡುವ ಉದ್ದೇಶದ ವರ್ತನೆ) ಮತ್ತು 62 (ಅಪರಾಧಕ್ಕೆ ಯತ್ನ) ಅಡಿಯಲ್ಲಿ, ಐಟಿ ಕಾಯ್ದೆಯ ಸಂಬಂಧಿತ ವಿಧಿಗಳೊಂದಿಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್ ಫೋನ್‌ನಲ್ಲಿ ಯಾವುದೇ ಫೋಟೊ ಅಥವಾ ವಿಡಿಯೋ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

‘ಆರೋಪಿ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಹೆಚ್ಚಿನ ಪರಿಶೀಲನೆಗಾಗಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ