LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಚಾರಣೆಗಾಗಿ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬಸ್ಥರಿಗೆ ನೋಟಿಸ್‌ ನೀಡಲಾಗಿದೆ. ಇನ್ನು ದೂರು ನೀಡಿದ್ದ ವಕೀಲ ವಿನೋದ್‌ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ.

ಏನಿದು ಪ್ರಕರಣ

ಕೆ.ಎಸ್‌. ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ 1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ದೂರುದಾರ ಬಿ. ವಿನೋದ್ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋಧ್ ಹೈಕೋರ್ಟ್ ಮೆಟ್ಟಿಲೇರಿದ್ದು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಗಣನೆಗೆ ಆದೇಶಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026