Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿಜೆಪಿ ಇಬ್ಬರು ಶಾಸಕರ ಮೇಲೆ ಎಫ್‌ಐಆರ್‌: ಎನ್.ರವಿಕುಮಾರ್ ಆಕ್ಷೇಪ



ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 25: ಕ್ಯಾಂಪಸ್ ಫ್ರಂಟ್, ಪಿಎಫ್‍ಐ, ಎಸ್‍ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸು ರದ್ದು ಮಾಡುವ ನೀವು ನಮ್ಮ ಶಾಸಕರ ಮೇಲೆ ಯಾಕೆ ಎಫ್‍ಐಆರ್ ದಾಖಲಿಸಿದ್ದೀರಿ? ಎಂಥ ಸರಕಾರ ನಿಮ್ಮದು’ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ರೋಶ ಹೊರಹಾಕಿದರು.ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಡಾ. ಅಶ್ವತ್ಥನಾರಾಯಣರ ವಿರುದ್ಧ ಎಫ್‍ಐಆರ್ ಮಾಡಿದ್ದನ್ನು ಆಕ್ಷೇಪಿಸಿದರು. ಯಾವ ಕಾರಣಕ್ಕೆ ಎಫ್‍ಐಆರ್ ಮಾಡಿದ್ದೀರಿ ಎಂದು ಮುಖ್ಯಮಂತ್ರಿಗಳನ್ನು ಮತ್ತು ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸುವುದಾಗಿ ತಿಳಿಸಿದರು.

ನಿಮ್ಮದು ಪಿಎಫ್‍ಐ ಕಾರ್ಯಕರ್ತರನ್ನು ರಕ್ಷಿಸುವ ಸರಕಾರವೇ? ಕ್ಯಾಂಪಸ್ ಫ್ರಂಟ್, ನಕ್ಸಲೀಯರನ್ನು ರಕ್ಷಿಸುವ ಸರಕಾರವೇ? ಹರೀಶ್ ಪೂಂಜ, ಡಾ. ಅಶ್ವತ್ಥನಾರಾಯಣರವರು ಟಿಪ್ಪು ಸುಲ್ತಾನ್ ಜಯಂತಿ ಮಾಡಬಾರದು ಎಂದು ಹೇಳಿದ್ದು ತಪ್ಪೇ? ನಮ್ಮ ಹಿಂದೂ ಧರ್ಮವನ್ನು ನಾಶ ಮಾಡಿದ, ಸಾವಿರಾರು ದೇವಾಲಯ ಧ್ವಂಸ ಮಾಡಿದ, ಲಕ್ಷಾಂತರ ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಧೋರಣೆಯನ್ನು ಅವರು ಖಂಡಿಸಿದ್ದು ತಪ್ಪೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಕ್ಯಾಂಪಸ್ ಫ್ರಂಟ್, ಪಿಎಫ್‍ಐ, ಎಸ್‍ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸುಗಳನ್ನು ತೆಗೆದುಹಾಕಿದ್ದೀರಿ. ನಮ್ಮ ಶಾಸಕರ ಮೇಲೆ ಎಫ್‍ಐಆರ್ ಮಾಡಿದ್ದೀರಿ; ಮಂಗಳೂರು ಮತ್ತಿತರ ಕಡೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎಫ್‍ಐಆರ್ ಮಾಡುತ್ತಿಲ್ಲ ಎಂದು ಟೀಕಿಸಿದರು. ನಮ್ಮ ಕಾರ್ಯಕರ್ತರು, ನಮ್ಮ ಶಾಸಕರ ಮೇಲೆಯೇ ಎಫ್‍ಐಆರ್ ಮಾಡುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ಆರೆಸ್ಸೆಸ್, ಧರ್ಮ ರಕ್ಷಣೆ ಮಾಡುತ್ತಿದೆ. ಬಡವರು, ಕಷ್ಟದಲ್ಲಿ ಇರುವವರ ಸೇವೆ ಮಾಡುತ್ತಿದೆ. ನೀವು ಪಿಎಫ್‍ಐ, ಕ್ಯಾಂಪಸ್ ಫ್ರಂಟ್, ಭಯೋತ್ಪಾದಕ ಸಂಘಟನೆಯನ್ನು ಬ್ಯಾನ್ ಮಾಡುವುದಿಲ್ಲ; ಧರ್ಮ ರಕ್ಷಿಸುವ ಬಜರಂಗದಳವನ್ನು ನಿಷೇಧಿಸಲು ಮುಂದಾಗಿದ್ದೀರಲ್ಲ ಎಂದು ಪ್ರಶ್ನಿಸಿದರು. ಶಿಸ್ತಿನಿಂದ ಶಾಖೆ ಮಾಡುವ, ದೇಶಭಕ್ತಿಯ ಪಾಠ ಹೇಳುವ, ಕೋಟ್ಯಂತರ ಸಂಖ್ಯೆಯ ಸ್ವಯಂಸೇವಕರನ್ನು ಆರೆಸ್ಸೆಸ್ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳುತ್ತೀರಲ್ಲ? ನಿಮಗೆ ಹುಚ್ಚು ಹಿಡಿದಿದೆ’ ಎಂದು ಆಕ್ರೋಶದಿಂದ ತಿಳಿಸಿದರು.

ಆರೆಸ್ಸೆಸ್ ಸಂಘಟನೆಯನ್ನು ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಬ್ಯಾನ್ ಮಾಡಿದ್ದರು. ಪರಿಣಾಮ ಏನಾಗಿದೆ ಎಂದು ಪ್ರಿಯಾಂಕ್ ಖರ್ಗೆಯವರು ತಮ್ಮ ಹಿರಿಯರಿಂದ ತಿಳಿದುಕೊಳ್ಳಲಿ. ಆಮೇಲೆ ಬ್ಯಾನ್ ಮಾಡಲಿ ಎಂದು ನುಡಿದರು. ರಾಜ್ಯದಲ್ಲಿ ಕೇಸರೀಕರಣ ಏನಾಗಿದೆ ಎಂದು ಮಾಹಿತಿ ಕೊಡಿ ಎಂದು ಅವರು ಆಗ್ರಹಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ