LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿ

ಬಾಂಗ್ಲಾದೇಶದ ಗರ್ಭಿಣಿ ಕೈದಿಯೊಬ್ಬರು ಮುಂಬೈನ ಜೆಜೆ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾರೆ. ಆಕೆಗಾಗಿ ಮುಂಬೈ ಪೊಲೀಸರು ನಗರದಾದ್ಯಂತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.25 ವರ್ಷದ ರುಬಿನಾ ಇರ್ಷಾದ್‌ ಶೇಖ್‌ ಅವರನ್ನು ಆ. 7 ರಂದು ನಕಲಿ ಜನನ ಪ್ರಮಾಣಪತ್ರವನ್ನು ಬಳಸಿಕೊಂಡು ಭಾರತೀಯ ಪಾಸ್‌‍ಪೋರ್ಟ್‌ ಪಡೆದಿದ್ದಕ್ಕಾಗಿ ವಾಶಿ ಪೊಲೀಸರು ಬಂಧಿಸಿದ್ದರು.

ಅವರ ಮೇಲೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳು ಹಾಗೂ ಪಾಸ್‌‍ಪೋರ್ಟ್‌ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಬೈಕುಲ್ಲಾ ಮಹಿಳಾ ಜೈಲಿಗೆ ಕಳುಹಿಸಲಾಗಿತ್ತು

ಆಗಸ್ಟ್‌ 11 ರಂದು ಜ್ವರ, ಶೀತ ಮತ್ತು ಚರ್ಮದ ಸೋಂಕಿನ ದೂರುಗಳೊಂದಿಗೆ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಜೊತೆಗೆ ಐದು ತಿಂಗಳ ಗರ್ಭಿಣಿಗೆ ಸಂಬಂಧಿಸಿದ ವೈದ್ಯಕೀಯ ತಪಾಸಣೆಗಾಗಿ ರುಬಿನಾಳನ್ನು ಕರೆದೊಯ್ಯಲಾಯಿತು.

ಆಗಸ್ಟ್‌ 14 ರಂದು ಮಧ್ಯಾಹ್ನದ ಸಮಯದಲ್ಲಿ, ಆಕೆ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಪತ್ರೆಯ ಜನಸಂದಣಿಯನ್ನು ಬಳಸಿಕೊಂಡು ಕಾನ್‌ಸ್ಟೆಬಲ್‌ನನ್ನು ತಳ್ಳಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಾಣೆಯಾದ ಕೈದಿಗಾಗಿ ಪೊಲೀಸರು ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ರುಬಿನಾಳನ್ನು ಆದಷ್ಟು ಬೇಗ ಬಂಧಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ಘಟನೆಯು ಜೈಲಿನಿಂದ ಆಸ್ಪತ್ರೆಗಳಿಗೆ ಕರೆತರುವ ಕೈದಿಗಳ ಭದ್ರತಾ ವ್ಯವಸ್ಥೆಯ ಬಗ್ಗೆಯೂ ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026