LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಸಮುದ್ರ ತೀರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಎನ್.ನಾರಾಯಣ, ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವಾಸಕ್ಕೆ ಆಗಮಿಸಿದ್ದ ಉಳಿದ ವಿದ್ಯಾರ್ಥಿಗಳನ್ನು ಕೋಲಾರದ ಮುಳುಬಾಗಿಲಿಗೆ ಸುರಕ್ಷಿತವಾಗಿ ತಲುಪಿಸುವ ವ್ಯವಸ್ಥೆ ಜಿಲ್ಲಾಡಳಿತದಿಂದ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ ಸಂಜೆ ಮುರ್ಡೇಶ್ವರ ಕಡಲ ತೀರದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ 7 ವಿದ್ಯಾರ್ಥಿನಿಯರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಿಸಿದ್ದರು. ಇನ್ನುಳಿದ ನಾಲ್ವರು ವಿದ್ಯಾರ್ಥಿನಿಯ ಪೈಕಿ ಒಬ್ಬಾಕೆ ಮೃತದೇಹ ಮಂಗಳವಾರವೇ ಪತ್ತೆಯಾಗಿದ್ದು, ಉಳಿದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆಉತ್ತರಾಖಂಡದಲ್ಲಿ ಮೇಘಸ್ಫೋಟ; ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ