LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ವಾಹಿನಿ ಯೋಜನೆ : ಅರ್ಜಿ ಅವಧಿ ವಿಸ್ತರಣೆ


ಶಿವಮೊಗ್ಗ ಮಾ.09 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನಾಂಕವೆAದು ನಿಗದಿಪಡಿಸಲಾಗಿತ್ತು. ಆಹಾರ ಯೋಜನೆ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳು/ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿರುತ್ತದೆ.

ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮುಖಾಂತರ ಸಲ್ಲಿಸಬಹುದು ಎಂದು ಡಿಬಿಸಿಡಿಸಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು