LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೇಮ್ಸ್, ಜೆಲ್ಲಿಸ್‌ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ- ಟೆಸ್ಟ್​​ಗೆ ಮುಂದಾದ ಆಹಾರ ಇಲಾಖೆ

ಬೆಂಗಳೂರು : ಮಕ್ಕಳಿಗೆ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ ಬಹಳ ಅಚ್ಚುಮೆಚ್ಚು. ಆದರೆ ಇವುಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಇವುಗಳನ್ನು ಮಕ್ಕಳಿಗೆ ನೀಡುವ ಮುನ್ನ ಪೋಷಕರು ಎಚ್ಚರಿಕೆ ವಹಿಸುವಂತೆ ಆಹಾರ ಇಲಾಖೆ ತಿಳಿಸಿದೆ.

ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್‌ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳು ಬರುವ ಜೊತೆಗೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್‌ಎಸ್‌ಎಸ್‌ಎಐ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್‌ಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಮುಂದಾಗಿದೆ.

ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್‌ಗಳಲ್ಲಿ ಕೃತಕ ಕಲರ್ ಬಳಕೆ ಮಾಡಲಾಗುತ್ತಿದೆ. ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿಲ್ಲ. ಚಾಕೊಲೇಟ್‌ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಇನ್ನು ವಿದೇಶದಿಂದ ಆಮದಾಗುವ ಪದಾರ್ಥಗಳನ್ನು ಕೂಡ ಪರೀಕ್ಷೆಗೆ ಒಳಪಡಿಸಲು ಆಹಾರ ಇಲಾಖೆ ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೆ ಕ್ರಮ ಕೈಗೊಳ್ಳಲು ಸಮರ ಸಾರಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST