LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

4ನೇ ಹಂತದ ಗಡಿಪಾರು: ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ತಾಯ್ನಾಡಿಗೆ

ನವದೆಹಲಿ: ಅಮೆರಿಕದ ನಾಲ್ಕನೇ ಹಂತದ ಗಡಿಪಾರು ಪ್ರಕ್ರಿಯೆಯಲ್ಲಿ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ತಾಯ್ನಾಡಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪನಾಮ ಮೂಲಕ 12 ಭಾರತೀಯರು ದೆಹಲಿಗೆ ಬಂದಿಳಿದಿದ್ದಾರೆ. 12 ಜನರಲ್ಲಿ ನಾಲ್ವರು ಪಂಜಾಬ್‌ನ ಅಮೃತಸರಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ಅಕ್ರಮ ವಲಸಿಗರ ನಾಲ್ಕನೇ ಬ್ಯಾಚ್ ಇಂದು ದೆಹಲಿಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 205 ಭಾರತೀಯರನ್ನು ಅಮೆರಿಕ ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಕಳುಹಿಸಲಾಗಿತ್ತು. 2ನೇ ಹಂತದಲ್ಲಿ 119 ಮಂದಿಯನ್ನು ಹಾಗೂ 3ನೇ ಹಂತದಲ್ಲಿ 112 ಭಾರತೀಯ ಅಕ್ರಮ ವಲಸಿಗರನ್ನು ಭಾರತಕ್ಕೆ ವಾಪಾಸ್ ಕರೆತರಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST