ಈ ಕಾರಣಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹ್ಯತೆ .!
ಬೆಂಗಳೂರು : ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ ನಡೆದಿದೆ.
ಹೆಬ್ಬಾಳ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸಾಲಗಾರರ ಕಾಟಕ್ಕೆ ಬೇಸತ್ತು ವೆಂಕಟೇಶ (50) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಇವರು ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ್ದರು. ಜೊತೆಗೆ ವೆಂಕಟೇಶ್ ಅನಾರೋಗ್ಯದಿಂದ ಕೂಡ ಬಳಲುತ್ತಿದ್ದರು. ನಿನ್ನೆ ಹೆಬ್ಬಾಳ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.