Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಪಂ ಮಟ್ಟದಲ್ಲಿ ತುರ್ತಾಗಿ ಮೇವು ವಿತರಣೆ ಕೇಂದ್ರ ತೆರೆಯಲು ಒತ್ತಾಯ

ಮಧುಗಿರಿ: ತಾಲೂಕು ಬರಪೀಡಿತ ಎಂದು ಘೋಷಣೆಯಾಗಿದ್ದರೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ದೊರೆಯುತ್ತಿಲ್ಲ. ತಕ್ಷಣ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೇವು ಬ್ಯಾಂಕ್ ಸ್ಥಾಪಿಸಿ, ನಿಗದಿತ ದರದಲ್ಲಿ ಮೇವು ಒದಗಿಸಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ನೇತೃತ್ವದಲ್ಲಿ  ನೂರಾರು ಹೈನುಗಾರರು ಹಾಗೂ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ದಂಡಿಮಾರಮ್ಮ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ತುಮುಲ್ ನಿರ್ದೇಶಕ ಕೊಂಡವಾಡಿ ಚಂಧ್ರಶೇಖರ್ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ, ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್, ಮುಂಗಾರು ಮಳೆ ಕೈಕೊಟ್ಟಿರುವುದರಿಂದ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ಬೋರ್‌ವೆಲ್‌ಗಳು ಬತ್ತಿಹೋಗಿವೆ. 400 ನೀಡಿದರೂ ಒಂದು ಹೊರೆ ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಮಧುಗಿರಿ ತಾಲೂಕಿನಲ್ಲಿ ಸುಮಾರು 40 ಸಾವಿರ ಜಾನುವಾರುಗಳಿದ್ದು, ಅವುಗಳ ಮೇವಿನ ಸಮಸ್ಯೆ ಗಂಭೀರವಾಗಿದೆ. ಸರಕಾರ ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ಮಾತ್ರ ಸಾಲದು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತುರ್ತಾಗಿ ಮೇವು ಬ್ಯಾಂಕ್ ತೆರೆದು, ಒಂದು ಹೊರೆಗೆ ನಿಗದಿತ ದರ ನಿಗದಿಪಡಿಸಿ ರೈತರಿಗೆ ಮೇವು ಪೂರೈಸಬೇಕು ಎಂದು ಆಗ್ರಹಿಸಿದರು.

ಹಾಲಿನ ದರ ಹೆಚ್ಚಳಕ್ಕೆ ಒತ್ತಾಯ
ಸೆ.11ರಂದು ನಡೆದ ತುಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಹಾಲಿನ ದರವನ್ನು 1 ಹೆಚ್ಚಿಸಲಾಗಿದೆ. ಇದರ ಬೆನ್ನಲ್ಲೇ ಖಾಸಗಿ ಫೀಡ್ ಮಾರಾಟಗಾರರು ಪ್ರತಿ ಚೀಲಕ್ಕೆ 100ರಷ್ಟು ದರ ಹೆಚ್ಚಿಸಿದ್ದಾರೆ. ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ದರವನ್ನು ಕನಿಷ್ಠ 10 ಹೆಚ್ಚಿಸಬೇಕು ಹಾಗೂ ಸರಕಾರ ನೀಡುತ್ತಿರುವ ಸಹಾಯಧನವನ್ನು 5ರಿಂದ 10ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಎತ್ತಿನಹೊಳೆ ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಲವೆಡೆ ಪೈಪ್‌ಲೈನ್ ಕಾಮಗಾರಿ ಮಾತ್ರ ನಡೆದಿದೆ. ಬರ ಪರಿಸ್ಥಿತಿಯನ್ನು ಗಮನಿಸಿ ನಿರ್ಮಾಣಗೊಂಡಿರುವ ಪೈಪ್‌ಲೈನ್ ಮೂಲಕ ಕನಿಷ್ಠ 1 ಟಿಎಂಸಿ ಹೇಮಾವತಿ ನೀರನ್ನು ಹರಿಸಿ, ತಾಲೂಕಿಗೆ ನೀರಿನ ಸಮಸ್ಯೆಯಿಂದ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

15 ದಿನಗಳ ಗಡುವು
ಪುರಸಭೆ ಮಾಜಿ ಸದಸ್ಯ ಎಂ.ಆರ್. ಜಗನ್ನಾಥ್ ಮಾತನಾಡಿ, ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ತಾಲೂಕುಗಳು ತೀವ್ರ ಬರದ ಸಂಕಷ್ಟ ಎದುರಿಸುತ್ತಿವೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಕೂಡಲೇ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 15 ದಿನಗಳೊಳಗೆ ಮೇವು ಬ್ಯಾಂಕ್ ಸ್ಥಾಪಿಸದಿದ್ದರೆ ಕೊಂಡವಾಡಿ ಚಂದ್ರಶೇಖರ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
 ರೈತ ಸಂಘದ ಶಂಕರಪ್ಪ  ಶ್ರೀನಿವಾಸ್  ಹಾಜರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST