Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನಮೂನೆ 6 ಬದಲಾವಣೆಗೆ ಅನುಮತಿ ನೀಡಿಲ್ಲ

ಹೊಸದಿಲ್ಲಿ, ಅ. 5 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಹೊಸ ಮತದಾರರ ನೋಂದಣಿಗೆ ಬಳಸುವ ನಮೂನೆ 6ರಲ್ಲಿ ಮಾಡಲಾಗಿರುವ ಯಾವುದೇ ಮಾರ್ಪಾಡಿಗೆ ಸುಪ್ರೀಂ ಕೋರ್ಟ ಅನುಮೋದನೆ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಸೋಮವಾರ ಸ್ಪಷ್ಟಪಡಿಸಿದ್ದಾರೆ. ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ನಮೂನೆ 6ರಲ್ಲಿ ಯಾರು, ಯಾವ ಬದಲಾವಣೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಸಹಮತವಿಲ್ಲದೆ ಎಸ್‌ಐಆರ್‌ಗೆ ಸಂಬಂಧಿಸಿದ 14 ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ವಕೀಲ ಶೈಲೇಂದ್ರ ಮಾಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಈ ಸ್ಪಷ್ಟನೆ ನೀಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರ ಪೀಠ ಪ್ರಕರಣದ ವಿಚಾರಣೆ ನಡೆಸಿತು.

ಎಸ್‌ಐಆರ್‌ ನಡೆಯುತ್ತಿರುವ ಕೆಲವು ರಾಜ್ಯಗಳಲ್ಲಿ ಬಳಸಲಾಗುತ್ತಿರುವ ನಮೂನೆ 6ಕ್ಕೆ ಹೊಸ ಘೋಷಣೆಯನ್ನು ಸೇರಿಸಲಾಗಿತ್ತು. ಹೊಸದಾಗಿ ಮತದಾರರಾಗಿ ನೋಂದಾಯಿಸಿಕೊಳ್ಳುವವರು ತಾವು ಅಥವಾ ತಮ್ಮ ಪೋಷಕರು ಹಿಂದಿನ ಎಸ್‌ಐಆರ್‌ ಮತದಾರರ ಪಟ್ಟಿಯಲ್ಲಿ ದಾಖಲಾಗಿದ್ದರೇ ಎಂಬ ಮಾಹಿತಿಯನ್ನು ನೀಡಬೇಕಾದ ವ್ಯವಸ್ಥೆಯನ್ನು ಇದರಲ್ಲಿ ಅಳವಡಿಸಲಾಗಿದೆ.

ಈ ಬದಲಾವಣೆ ವಿವಾದಕ್ಕೆ ಕಾರಣವಾಗಿತ್ತು. 1960ರ ಮತದಾರರ ನೋಂದಣಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡದೆ ನಮೂನೆ 6ರಲ್ಲಿ ಇಂತಹ ಬದಲಾವಣೆ ಮಾಡಲಾಗದು ಎಂದು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ನಮೂನೆ 6ರ ಬದಲಾವಣೆ ಸೇರಿದಂತೆ ಎಸ್‌ಐಆರ್‌ಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ಇಬ್ಬರು ಆಯುಕ್ತರು ಆಕ್ಷೇಪ ದಾಖಲಿಸಿದ್ದರು ಎಂಬ ಆರೋಪವೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ ಚುನಾವಣಾ ಆಯೋಗವು ಸೆಪ್ಟೆಂಬರ್ 26ರಂದು ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ಬಿಹಾರ ಎಸ್‌ಐಆರ್‌ಗೆ ಸಂಬಂಧಿಸಿದಂತೆ 2026ರ ಮೇ ತಿಂಗಳಲ್ಲಿ ನೀಡಿದ ತೀರ್ಪಿನಲ್ಲಿ ನಮೂನೆ 6ರ ಘೋಷಣೆಯನ್ನು ಸುಪ್ರೀಂ ಕೋರ್ಟ ಎತ್ತಿಹಿಡಿದಿದೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸಿಜೆಐ ನೀಡಿರುವ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ.

“ನಮೂನೆ 6ರ ಯಾವುದೇ ಮಾರ್ಪಡಿಸಿದ ರೂಪಕ್ಕೆ ನಾವು ಅನುಮೋದನೆ ನೀಡಿಲ್ಲ. ಈ ಬಗ್ಗೆ ಸ್ಪಷ್ಟವಾಗಿರಲಿ. ದಾಖಲೆಗಳನ್ನು ನಮ್ಮ ಮುಂದೆ ಹಾಜರುಪಡಿಸಿದಾಗ ಯಾರು ಏನು ಬದಲಾವಣೆ ಮಾಡಿದ್ದಾರೆ ಎಂಬುದನ್ನು ನೋಡುತ್ತೇವೆ” ಎಂದು ಸಿಜೆಐ ಸೂರ್ಯಕಾಂತ ಹೇಳಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲೆ ಮೇನಕಾ ಗುರುಸ್ವಾಮಿ ವಾದ ಮಂಡಿಸಿ, ನಮೂನೆ 6ರಲ್ಲಿ ಕಾನೂನುಬಾಹಿರವಾಗಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗದ ಇಸಿಐನೆಟ್‌ ಪೋರ್ಟಲ್‌ನಲ್ಲಿ 2026ರ ಜುಲೈನಲ್ಲಿ ನಮೂನೆ 6ನ್ನು ಡಿಜಿಟಲ್ ರೂಪದಲ್ಲಿ ಬದಲಾಯಿಸಲಾಗಿದ್ದು, ಈ ಕ್ರಮಕ್ಕೆ ಚುನಾವಣಾ ಆಯುಕ್ತ ಸಂಧು ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಅಂಶವನ್ನೂ ಅರ್ಜಿಯಲ್ಲಿ ಮುಂದಿಡಲಾಗಿದೆ.

ಗ್ಯಾನೇಶ ಕುಮಾರ ಅವರು ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎನ್ನಲಾದ 14 ನಿರ್ಧಾರಗಳನ್ನು ರದ್ದುಪಡಿಸಬೇಕು, ಪ್ರಕರಣದ ಕುರಿತು ನಿವೃತ್ತ ಸುಪ್ರೀಂ ಕೋರ್ಟ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖಾ ಆಯೋಗ ಅಥವಾ ವಿಶೇಷ ತನಿಖಾ ತಂಡ ರಚಿಸಬೇಕು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸುಪ್ರೀಂ ಕೋರ್ಟ ಅರ್ಜಿಯ ಕುರಿತು ನೋಟಿಸ್ ಜಾರಿಗೊಳಿಸಿದ್ದು, ಚುನಾವಣಾ ಆಯೋಗದ ಪ್ರತಿಕ್ರಿಯೆ ಮತ್ತು ಅಧಿಕೃತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಸಲಿದೆ. ಇದೇ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿಯೊಂದಿಗೆ ತ್ರಿಪಾಠಿ ಅವರ ಅರ್ಜಿಯನ್ನು ಪೀಠವು ಸೇರಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ