Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫಾರಂ 7 ಅಕ್ರಮ: ಚುನಾವಣಾ ಆಯೋಗದ ಮುಂದೆ ಸರ್ಕಾರದ ಧರಣಿ

ಬೆಂಗಳೂರು, ಅ. 1 : (ಸಮದರ್ಶಿ ಸುದ್ದಿ) - ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಫಾರಂ–7 ಅನ್ನು ಅಕ್ರಮವಾಗಿ ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬಂಧಿಸುವವರೆಗೂ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಸಚಿವರೊಂದಿಗೆ ಧರಣಿ ನಡೆಸಿದ್ದಾರೆ.

ರಾಜ್ಯದಲ್ಲಿ ಸುಮಾರು 50 ಲಕ್ಷ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕುವ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ, ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಫಾರಂ 7 ಅರ್ಜಿಗಳನ್ನು ಸಲ್ಲಿಸುವ ಮೂಲಕ ಅಕ್ರಮ ನಡೆಸಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ, ಬಳಿಕ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ನಡೆಯುತ್ತಿರುವ ಪ್ರಯತ್ನಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ಫಾರಂ 7 ದುರ್ಬಳಕೆ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಒತ್ತಾಯಿಸಿದರು.

ದೂರಿನ ಕುರಿತು ಪರಿಶೀಲನೆ ನಡೆಸಲು ಎರಡು ದಿನಗಳ ಕಾಲಾವಕಾಶ ಬೇಕು ಮತ್ತು ಪರಿಶೀಲನೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದರೆನ್ನಲಾಗಿದೆ. ಆದರೆ ಇದಕ್ಕೆ ಒಪ್ಪದ ಮುಖ್ಯಮಂತ್ರಿ ಹಾಗೂ ಸಚಿವರು, ಮೊದಲು ಎಫ್‌ಐಆರ್‌ ದಾಖಲಿಸಬೇಕು ಎಂದು ಪಟ್ಟು ಹಿಡಿದರು.

“ಎಫ್‌ಐಆರ್‌ ದಾಖಲಾಗುವವರೆಗೂ ಇಲ್ಲಿಂದ ಕದಲುವುದಿಲ್ಲ. ಮೊದಲು ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಬೇಕು. ಅಲ್ಲಿಯವರೆಗೂ ನಾವು ಈ ಜಾಗ ಬಿಟ್ಟು ಹೋಗುವುದಿಲ್ಲ” ಎಂದು ಡಿ.ಕೆ. ಶಿವಕುಮಾರ ಪಟ್ಟು ಹಿಡಿದರು.

ಇದರಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮುಖ್ಯಮಂತ್ರಿ, ಸಚಿವರು ಹಾಗೂ ಕಾಂಗ್ರೆಸ್‌ ನಾಯಕರು ಕಚೇರಿ ಮುಂದೆಯೇ ಧರಣಿಗೆ ಕುಳಿತು ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನೂ ರದ್ದುಪಡಿಸಿ, ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವರು ಧರಣಿಯಲ್ಲಿ ಪಾಲ್ಗೊಂಡರು.

ಫಾರಂ 7 ಅರ್ಜಿಗಳಲ್ಲಿ ಮತದಾರರ ಹೆಸರು ಮತ್ತು ಇತರ ವಿವರಗಳನ್ನು ಮೊದಲೇ ಮುದ್ರಿಸಿರುವುದು ಗಂಭೀರ ಅನುಮಾನಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. “ಇಷ್ಟೊಂದು ಪ್ರಮಾಣದ ಮತದಾರರ ದತ್ತಾಂಶ ಇವರಿಗೆ ಹೇಗೆ ಸಿಕ್ಕಿತು? ಪೂರ್ವಮುದ್ರಿತ ಫಾರಂ–7 ಅರ್ಜಿಗಳನ್ನು ಸಿದ್ಧಪಡಿಸಿದವರು ಯಾರು? ಇದಕ್ಕೆ ಹಣ ಒದಗಿಸುತ್ತಿರುವವರು ಯಾರು?” ಎಂಬ ಪ್ರಶ್ನೆಗಳನ್ನು ಅವರು ಎತ್ತಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸಾಮಾನ್ಯ ನಾಗರಿಕರೇ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಎಸ್‌ಐಆರ್‌ಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಫಾರಂ 7 ಮೂಲಕ ಮತದಾರರ ಹೆಸರನ್ನು ತೆಗೆದುಹಾಕುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಮೂಲ, ಅವುಗಳನ್ನು ಸಲ್ಲಿಸಿದವರು, ಪೂರ್ವಮುದ್ರಿತ ಅರ್ಜಿಗಳಿಗೆ ಬಳಸಲಾದ ಮತದಾರರ ದತ್ತಾಂಶ ಎಲ್ಲಿಂದ ದೊರೆಯಿತು ಹಾಗೂ ಇದರ ಹಿಂದೆ ಸಂಘಟಿತ ಜಾಲವಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬುದು ಸರ್ಕಾರದ ಆಗ್ರಹವಾಗಿದೆ.

ಅರ್ಹ ಮತದಾರರ ಹೆಸರು ಮತಪಟ್ಟಿಯಿಂದ ಅನ್ಯಾಯವಾಗಿ ತೆಗೆದುಹಾಕದಂತೆ ಚುನಾವಣಾ ಆಯೋಗ ಖಚಿತಪಡಿಸಬೇಕು ಮತ್ತು ಅಕ್ರಮ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ