LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಭಿಮಾನಿ ತಲೆ ಮೇಲೆ ಹರಿದ ಮಾಜಿ ಸಿಎಂ ಜಗನ್ ಮೋಹನ್ ಕಾರು - ವ್ಯಕ್ತಿ ಮೃತ್ಯು

ಆಂದ್ರಪ್ರದೇಶ : ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

ಪಲ್ನಾಡು ಜಿಲ್ಲೆಗೆ ಭೇಟಿ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವೈಎಸ್‌ಆರ್‌ಸಿಪಿ ಪಕ್ಷದ ಕಟ್ಟಾ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ ಎಂದು ಹೇಳಲಾಗಿದೆ.

ಜಗನ್‌ ಮೋಹನ್‌ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ನೆರೆದಿದ್ದರು. ಈ ವೇಳೆ ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರು ಮುಂಭಾಗದಲ್ಲಿ ಬಿದ್ದಿದ್ದಾನೆ. ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಚಕ್ರ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯರು ಕೂಡಲೇ ಪೊಲೀಸರ ಗಮನಕ್ಕೆ ಈ ವಿಷಯ ತಂದಿದ್ದಾರೆ. ಕೂಡಲೇ ಸಿಂಗಯ್ಯ ನನ್ನುಗುಂಟೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, ಕಾರು ಚಾಲಕ ರಮಣ ರೆಡ್ಡಿ ಹಾಗೂ ಜಗನ್ ಇದ್ದ ಕಾರು ಮಾಲೀಕ ಕೃಷ್ಣ ಎನ್ನುವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಚಾಲಕ ರಮಣ ರೆಡ್ಡಿಯನ್ನು ಬಂಧಿಸಲಾಗಿದೆ. ಎ2 ಆರೋಪಿಯಾಗಿರುವ ಜಗನ್ ಮೋಹನ್ ರೆಡ್ಡಿ ಸದ್ಯ ಬೆಂಗಳೂರಿನಲ್ಲಿ ಇದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026