LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇರಳದ ಮಾಜಿ ಸಿಎಂ, ಸಿಪಿಐಎಂ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್ ನಿಧನ

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಐಎಂ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್(101) ಅವರು ಸೋಮವಾರ ಮಧ್ಯಾಹ್ನ 3.20ಕ್ಕೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಚ್ಯುತಾನಂದನ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅಲಪ್ಪುಳಕ್ಕೆ ಕೊಂಡೊಯ್ಯಲಾಗುವುದು. ಹಾಗೂ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಜೂನ್ 23 ರಂದು ಹೃದಯಾಘಾತದಿಂದ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸೋಮವಾರ ಮಧ್ಯಾಹ್ನ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಸೇರಿದಂತೆ ಇತರ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ವಿ.ಎಸ್. ಅಚ್ಯುತಾನಂದನ್ ಅವರು 2019 ರಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಕೇರಳದ ಅತ್ಯಂತ ಹಿರಿಯ ಮುಖ್ಯಮಂತ್ರಿಯಾಗಿದ್ದ ವಿ.ಎಸ್. ಅಚ್ಯುತಾನಂದನ್ ಅವರು ಸುಮಾರು ಐದು ದಶಕಗಳ ಕಾಲ ರಾಜ್ಯದ ಸಾಮಾಜಿಕ-ರಾಜಕೀಯ ಕ್ಷೇತ್ರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರು 2006 ರಿಂದ 2011 ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026