LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಎಸ್ ಬಂಗಾರಪ್ಪ ಆಡಳಿತ ಎಂದಿಗೂ ಜೀವಂತ

ಶಿವಮೊಗ್ಗ : ಬಡವರು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಆಡಳಿತ ಎಂದಿಗೂ ಜೀವಂತ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಎಸ್.ಬಂಗಾರಪ್ಪ ಫೌಂಡೇಶನ್ ಹಾಗೂ ಎಸ್.ಬಂಗಾರಪ್ಪ ವಿಚಾರ ವೇದಿಕೆ ವತಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೧೨ನೇ ಪುಣ್ಯ ಸ್ಮರಣೆ ನಿಮಿತ್ತ ಮಂಗಳವಾರ ಹಮ್ಮಿಕೊಂಡ ‘ಎಸ್.ಬಂಗಾರಪ್ಪ ಸವಿ ನೆನಪು' ಕಾಂiÄðಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್.ಬಂಗಾರಪ್ಪ ಅವರ ಒಡನಾಟ ಮರೆಯುವಂತದ್ದಲ್ಲ. ಅಂದು-ಇAದಿನ ರಾಜಕಾರಣ ಮಧ್ಯೆ ಅಂತರ ಹೆಚ್ಚಿದೆ. ಅಂದಿನ ಬದ್ಧತೆ ಇಂದು ರಾಜಕಾರಣದಲ್ಲಿ ಉಳಿಯದೆ ಕಲುಷಿತ ಗೊಂಡಿದೆ. ನಮಗೆ ದಾರಿ ತೋರಿಸಿದ ಕೆಲವರಲ್ಲಿ ಬಂಗಾರಪ್ಪ ಅವರು ಕೂಡ ಒಬ್ಬರಾಗಿದ್ದಾರೆ ಎಂದರು.
ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಿ ರೈತ ವರ್ಗದಲ್ಲಿ ನೆಲೆಸಿದ್ದಾರೆ. ಯಾವುದೇ ವ್ಯಕ್ತಿಯ ಹೆಜ್ಜೆ ಗುರುತುಗಳು ಮುಖ್ಯವಾಗಿದ್ದು, ಸತ್ತಮೇಲೂ ಜನಮಾನಸದಲ್ಲಿ ಬದುಕುವುದು ಅಷ್ಟು ಸುಲಭವಲ್ಲ. ಆದರೆ ಬಂಗಾರಪ್ಪ ಅವರು ಇಂದಿಗೂ ಜನಮಾನಸದಲ್ಲಿ ಉಳಿದ್ದಾರೆ ಎಂದು ತಿಳಿಸಿದರು.
ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಎಸ್.ಬಂಗಾರಪ್ಪ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅವರಿಗೆ ರಾಜಕೀಯ ಅಧಿಕಾರ ಸಿಕ್ಕಿದ್ದು ಅವರೊಬ್ಬ ಸಮಾಜವಾದಿಗಳು ಎಂಬುದಕ್ಕೆ. ಗೇಣಿದಾರರ ಹೋರಾಟಕ್ಕೆ ಸ್ಪಂದನೆ ನೀಡಿದ ಬಂಗಾರಪ್ಪ ಅವರು ಎತ್ತರಕ್ಕೆ ಬೆಳೆದಿದ್ದರು. ಬಡವರನ್ನು ಮುನ್ನೆಲೆಯಲ್ಲಿ ಇಟ್ಟುಕೊಂಡು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ನನ್ನ ತಂದೆ ತಾಯಿ ಹೊಟ್ಟೆಯಲ್ಲಿ ಹುಟ್ಟಿದಕ್ಕೆ ಧನ್ಯನಾಗಿದ್ದೇನೆ. ಎಸ್.ಬಂಗಾರಪ್ಪ ಅವರ ಸಮಾಧಿ ಸ್ಥಳ ಜನರಿಗೆ ಮುಕ್ತವಾಗಿರುತ್ತದೆ. ಉಚಿತವಾಗಿ ಎಲ್ಲರೂ ಬಳಸಿಕೊಳ್ಳಬಹುದು. ನಾನು ರಾಜ್ಯಾದ್ಯಂತ ಚಲಿಸಿದಾಗ ನಾಡಿನ ಜನಮಾನಸದಲ್ಲಿ ತಂದೆ ಬಂಗಾರಪ್ಪ ಅವರು ನೆಲೆಸಿದ್ದನ್ನ ಕಂಡು ಹೃದಯ ತುಂಬಿ ಬಂದಿದೆ. ಅವರ ಹೆಸರನ್ನು ಉಳಿಸಿಕೊಂಡು ಹೋಗುವ ಕೆಲಸ ನಿರಂತರ ಮಾಡುತ್ತೇನೆಎಂದರು.
ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ಟಿ ನಾಯ್ಕ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಆರ್.ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಎಂ.ಆರ್.ಮAಜುನಾಥ್ ಗೌಡ, ಎಸ್.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ಎಸ್.ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್