LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್​​ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ.

ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸಲಹೆಗಾರರು ಹಿರಿಯ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡವಿತ್ತು ಎಂದು ಹೇಳಿದ್ದಾರೆ.



ಶಿಮ್ಲಾದ ಆಸ್ಪತ್ರೆಯಲ್ಲಿ ಅವರ ನಿಯಮಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಅಧಿಕ ರಕ್ತದೊತ್ತಡದ ಇದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.ಇದು ಸಾಮಾನ್ಯ ತಪಾಸಣೆಯಾಗಿತ್ತು. ಇದಾದ ನಂತರ ಅವರು ತಮ್ಮ ಮನೆಗೆ ಮರಳಿದರು ಎಂದು ಮಾಹಿತಿ ನೀಡಿದ್ದಾರೆ.

ಒಂದು ವಾರದ ಹಿಂದೆ ಸೋನಿಯಾ ಗಾಂಧಿ ಇದ್ದಕ್ಕಿದ್ದಂತೆ ಅಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ (ಐಜಿಎಂಸಿ)ಗೆ ಹೋಗಿದ್ದು, ವೈದ್ಯರು ಅವರ ತಪಾಸಣೆ ನಡೆಸಿದ್ದರು. ಮುನ್ನೆಚ್ಚರಿಕೆಯಾಗಿ, ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಲಾಗಿತ್ತು, ಆರೋಗ್ಯ ಉತ್ತಮವಾಗಿತ್ತು. ಸುಮಾರು ಒಂದು ಗಂಟೆಯ ನಂತರ, ಸೋನಿಯಾ ಛರಬ್ರಾದಲ್ಲಿರುವ ತಮ್ಮ ಮಗಳು ಪ್ರಿಯಾಂಕಾ ಗಾಂಧಿಯವರ ಮನೆಗೆ ಮರಳಿದ್ದರು.

2022ರಲ್ಲಿ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಸಮಯದಲ್ಲಿಯೂ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಅವರಿಗೆ ಕ್ಯಾನ್ಸರ್‌ ರೋಗ ಇದೆ ಎನ್ನಲಾಗುತ್ತಿದೆ. ಇದರ ಚಿಕಿತ್ಸೆಗಾಗಿ ಹಲವು ಬಾರಿ ಅಮೆರಿಕಕ್ಕೆ ಹೋಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026