Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ: ಬೆಂಬಲಿಗರ ಪ್ರತಿಭಟನೆ

ಬೆಳಗಾವಿ: ಮಾಜಿ ಡಿಸಿಎಂ ಹಾಗೂ ಹಾಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು  ಗಾಣಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ

ಬೆಳಗಾವಿಯಲ್ಲಿ ಗಾಣಿಗ ಸಮಾಜ ಮುಖಂಡರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು‌. ಪ್ರತಿಭಟನಾ ರ್ಯಾಲಿಯನ್ನು ನಗರದ ರಾಣಿ ಚನ್ನಮ್ಮ ವೃತ್ತದಿಂದ ನಡೆಸಲಾಯಿತು. ಬಳಿಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಸಮಾಜದ ಮುಖಂಡರು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದ ವಿಸ್ತರಣೆಯ ವೇಳೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.

ಸಂಪುಟ ವಿಸ್ತರಣೆಯ ವೇಳೆ ಗಾಣಿಗ ಸಮಾಜದ ಹಿರಿಯರಾದ ಮಾಜಿ ಡಿಸಿಎಂ ಮತ್ತು ಹಾಲಿ ಅಥಣಿಯ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಕರ್ನಾಟಕದಲ್ಲಿ ಸುಮಾರು 40 ರಿಂದ 50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಸ್ವಾತಂತ್ರ್ಯ ನಂತರ ನಮ್ಮ ಸಮಾಜಕ್ಕೆ ಇಲ್ಲಿಯವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಒಂದು ವೇಳೆ ಗಾಣಿಗ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದರೇ, ಮುಂಬರುವ ದಿನಗಳಲ್ಲಿ ಗಾಣಿಗ ಸಮಾಜದಿಂದ ಕಠಿಣ ತಿರ್ಮಾನ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.

ಗಾಣಿಗ ಸಮಾಜದ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈ ಸಮಾಜದವರೇ ಆದ ಲಕ್ಷ್ಮಣ ಸವದಿ ಅವರು ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ವಿಸ್ತರಣೆಯಲ್ಲಿ ಲಕ್ಷ್ಮಣ ಸವದಿ ಅವರನ್ನು ಗಂಭೀರವಾಗಿ ಪರಿಗಣಿಸಬೇಕು. 

ಸಂಪೂರ್ಣ ಸಮಾಜ ಅವರ ಬೆಂಬಲಿಕ್ಕಿದು, ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೇ ರಾಜ್ಯಾದ್ಯಂತ ಗಾಣಿಗ ಸಮಾಜದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಕೆಯನ್ನು ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ