LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ನಿಧನ

ಚಾಮರಾಜನಗರ : ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.ಬುಧವಾರ ಗೃಹ ಪ್ರವೇಶ ಹಿನ್ನೆಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೋಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಜಯಣ್ಣ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಕಾರಿನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ಕೆಮ್ಮು ಹಾಗೂ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ಕರೆತರುವ ಮುನ್ನ ಮಾರ್ಗಮಧ್ಯೆ ಜಯಣ್ಣ ಕೊನೆಯುಸಿರೆಳೆದಿದ್ದಾರೆ.

ಸಣ್ಣಯ್ಯ, ಪುಟ್ಟನಂಜಮ್ಮ ದಂಪತಿಯ ಸುಪುತ್ರನಾದ ಜಯಣ್ಣ 1952ರ ಸೆ.9ರಂದು ಜನಿಸಿದರು. 72 ವಯಸ್ಸಿನ ಜಯಣ್ಣ ರಾಜ್ಯ ಸರ್ಕಾರ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಜಯಣ್ಣ ಎರಡು ಬಾರಿ ಶಾಸಕರಾಗಿದ್ದರು. ಅನಾರೋಗ್ಯದ ಹಿನ್ನೆಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ.

1999ರಲ್ಲಿ ಜೆಡಿಎಸ್‌ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯನವರ ಆಪ್ತರಾಗಿದ್ದರು. ಜಯಣ್ಣ ಅವರ ಅಂತ್ಯಕ್ರಿಯೆ ಬುಧವಾರ ಮಾಂಬಳ್ಳಿ ಗ್ರಾಮದಲ್ಲಿ ನಡೆಯಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!